ಸೆ.06 ರಂದು ಸಾಂಸ್ಕøತಿಕ ಕ್ರೀಡಾ ಚಟುವಟಿಕೆ ಉದ್ಘಾಟನೆ 


ಮಡಿಕೇರಿ ಆ.30(TOC ಕೊಡಗು):-ಕಾಲೇಜು ಶಿಕ್ಷಣ ಇಲಾಖೆ, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ 2019-20 ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ಸಾಂಸ್ಕøತಿಕ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್, 6 ರಂದು ಬೆಳಗ್ಗೆ 11 ಗಂಟೆಗೆ ಕಾಲೇಜು ಆವರಣದಲ್ಲಿ ನಡೆಯಲಿದೆ. ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದ ಡಿ.ಜೆ.ಜವರಪ್ಪ, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಮತ್ತಿತರರು ಪಾಲ್ಗೊಳ್ಳಲಿದ್ದಾರೆ.
Previous Post
Next Post

0 Post a Comment: