ಟೈಮ್ಸ್ ಆಫ್ ಕೂರ್ಗ್
ನಿವೃತ್ತ ರಾಜ್ಯ ಸರ್ಕಾರಿ ನೌಕರರ ಪಿಂಚಣೆ ಕುಂದುಕೊರತೆಗಳ ಪರಿಹಾರಕ್ಕಾಗಿ ಆಗಸ್ಟ್ 23 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಪಿಂಚಣಿ ಅದಾಲತ್ ನಡೆಯಲಿದೆ.
ನಿವೃತ್ತ ರಾಜ್ಯ ಸರ್ಕಾರಿ ನೌಕರರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ. ಹಾಗೂ ಪಿಂಚಣೆ ಸಂಬಂಧ ದೂರುಗಳೇನಾದರೂ ಇದ್ದಲ್ಲಿ ಆ ದಿನಾಂಕದ ಮುಂಚಿತವಾಗಿ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 6 ರಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿ, ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ದಾಖಲಿಸುವಂತೆ ಮತ್ತು ಆಗಸ್ಟ್, 23 ರಂದು ಅದಾಲತ್ನಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

0 Post a Comment: