ಆ.23 ರಂದು ನಿವೃತ್ತ ರಾಜ್ಯ ಸರ್ಕಾರಿ ನೌಕರರ ಪಿಂಚಣಿ ಅದಾಲತ್ 


ಮಡಿಕೇರಿ : ನಿವೃತ್ತ ರಾಜ್ಯ ಸರ್ಕಾರಿ ನೌಕರರ ಪಿಂಚಣೆ ಕುಂದುಕೊರತೆಗಳ ಪರಿಹಾರಕ್ಕಾಗಿ ಆಗಸ್ಟ್ 23 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಮೊದಲ ಮಹಡಿಯ ಕೊಠಡಿ ಸಂಖ್ಯೆ 6 ರಲ್ಲಿ ಪಿಂಚಣಿ ಅದಾಲತ್ ನಡೆಯಲಿದೆ. ನಿವೃತ್ತ ರಾಜ್ಯ ಸರ್ಕಾರಿ ನೌಕರರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ. ಹಾಗೂ ಪಿಂಚಣೆ ಸಂಬಂಧ ದೂರುಗಳೇನಾದರೂ ಇದ್ದಲ್ಲಿ ಆ ದಿನಾಂಕದ ಮುಂಚಿತವಾಗಿ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 6 ರಲ್ಲಿರುವ ಸಹಾಯಕ ನಿರ್ದೇಶಕರ ಕಚೇರಿ, ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆ ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ದಾಖಲಿಸುವಂತೆ ಮತ್ತು ಆಗಸ್ಟ್, 23 ರಂದು ಅದಾಲತ್‍ನಲ್ಲಿ ಭಾಗವಹಿಸುವಂತೆ ಪಿಂಚಣಿ, ಸಣ್ಣ ಉಳಿತಾಯ, ಮತ್ತು ಆಸ್ತ್ತಿ-ಋಣ ನಿರ್ವಹಣೆ ಸಹಾಯಕ ನಿರ್ದೇಶಕರು ಅವರು ತಿಳಿಸಿದ್ದಾರೆ.
Previous Post
Next Post

0 Post a Comment: