ಆ.7 ರಂದು ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ


 ಮಡಿಕೇರಿ ಆ.೦೨ : ಪ್ರಸಕ್ರ(೨೦೧೯-೨೦) ಸಾಲಿನ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ಕೊಡಗು ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಯು ಆಗಸ್ಟ್, ೦೭ ರಂದು ಬೆಳಗ್ಗೆ ೧೦ ಗಂಟೆಗೆ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೇಬಲ್ ಟೆನ್ನಿಸ್ ಪಂದ್ಯಾವಳಿಯು ೧೪ ವರ್ಷಕ್ಕೆ ಒಳಪಟ್ಟ ಬಾಲಕ/ ಬಾಲಕಿಯರಿಗೆ ಹಾಗೂ ೧೮ ವರ್ಷ ಒಳಪಟ್ಟ ಪುರುಷರಿಗೆ ಮತ್ತು ಮಹಿಳೆಯರಿಗಾಗಿ ಸಿಂಗಲ್ಸ್ ಮತ್ತು ಡಬಲ್ಸ್ ಟೇಬಲ್ ಟೆನ್ನಿಸ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಟೇಬಲ್ ಟೆನ್ನಿಸ್ ಆಟಗಾರರು ಟಿ.ಟಿ.ಬ್ಯಾಟ್ ಅನ್ನು ತಾವೇ ತರತಕ್ಕದ್ದು ಹಾಗೂ ಭಾಗವಹಿಸುವ ಕ್ರೀಡಾಪಟುಗಳಿಗೆ ಯಾವುದೇ ರೀತಿಯ ಪ್ರವೇಶ ಶುಲ್ಕ ಇರುವುದಿಲ್ಲ. ಆಗಸ್ಟ್, ೦೬ ರೊಳಗೆ ಕಚೇರಿಯಲ್ಲಿ ಹೆಸರು ನೊಂದಾಯಿಸಿಕೊಳ್ಳಬೇಕು. ಈ ಪಂದ್ಯಾವಳಿಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿಗೆ ಕಚೇರಿಯ ದೂರವಾಣಿ ಸಂಖ್ಯೆ: ೦೮೨೭೨-೨೨೮೯೮೫ ನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Previous Post
Next Post

0 Post a Comment: