ಮಡಿಕೇರಿ: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಆ.8 ರಂದು ಬೆಳಗ್ಗೆ 10 ಗಂಟೆಗೆ ಮಡಿಕೇರಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಗೆ ಸ್ಪರ್ಧೆ ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ಸ್ಪರ್ಧಿಗಳಿಗೆ 40 ಅಂಕಗಳಿಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ನಂತರ 50 ಅಂಕಗಳಿಗೆ ವಿಜ್ಞಾನ ಮಾದರಿಯೊಂದಿಗೆ ಯೋಜನೆ ಮಂಡಿಸಬೇಕಾಗಿದೆ. ನಂತರ 10 ಅಂಕಗಳಿಗೆ ವಿದ್ಯಾರ್ಥಿಗಳು ಈ ತನಕ ಗಳಿಸಿರುವ ಪ್ರಶಸ್ತಿ ಪತ್ರಗಳ ದಾಖಲಾತಿಗಳೊಂದಿಗೆ ಸಂದರ್ಶನ ನಡೆಸಲಾಗುವುದು ಎಂದು ಸ್ಪರ್ಧಾ ಕಾರ್ಯಕ್ರಮದ ಜಿಲ್ಲಾ ಸಂಯೋಜಕ ಟಿ.ಜಿ.ಪ್ರೇಮಕುಮಾರ್ ಅವರು ತಿಳಿಸಿದ್ದಾರೆ. ಸ್ಪರ್ಧೆಯಲ್ಲಿ ಭಾಗವಹಿಸಲಿರುವ ವಿದ್ಯಾರ್ಥಿಗಳು 6 ನೇ ತರಗತಿ ನಂತರ ವಿಜ್ಞಾನದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪಡೆದ ಪ್ರಶಸ್ತಿ/ ಅಭಿನಂದನಾ ಪತ್ರ ತರಬೇಕು ಎಂದು ತಿಳಿಸಲಾಗಿದೆ. ಸ್ಪರ್ಧೆಗೆ ಸಂಬಂಧಿಸಿದಂತೆ ಈಗಾಗಲೇ ಶಿಕ್ಷಣ ಇಲಾಖೆಗೆ ನಿಗದಿತ ಅರ್ಜಿ ನಮೂನೆಯಲ್ಲಿ ಪ್ರಸ್ತಾವನೆ ಸಲ್ಲಿಸಿರುವ ವಿದ್ಯಾರ್ಥಿಗಳು ತಮ್ಮ ಮಾರ್ಗದರ್ಶಿ ಶಿಕ್ಷಕರು/ಉಪನ್ಯಾಸಕರೊಂದಿಗೆ ಸ್ಪರ್ಧೆಗೆ ಹಾಜರಾಗಲು ತಿಳಿಸಲಾಗಿದೆ. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಗೊಳ್ಳುವ ವಿದ್ಯಾರ್ಥಿಗಳಿಗೆ ಪ್ರಥಮ ರೂ.5 ಸಾವಿರ, ದ್ವಿತೀಯ ರೂ.3 ಸಾವಿರ ಹಾಗೂ ತೃತೀಯ ರೂ. 2 ಸಾವಿರ ಹಾಗೂ ನಂತರ ರಾಜ್ಯಮಟ್ಟದಲ್ಲಿ ಆಯ್ಕೆಗೊಳ್ಳುವ 4 ಯುವ ವಿಜ್ಞಾನಿಗಳಿಗೆ ತಲಾ ರೂ.10 ಸಾವಿರ ನಗದು ಬಹುಮಾನ ಮತ್ತು ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಆ.8 ರಂದು ಯುವ ವಿಜ್ಞಾನಿ ಪ್ರಶಸ್ತಿಗೆ ಆಯ್ಕೆ
Categories:
ಕೊಡಗು
Publish Date:
August 06, 2019

0 Post a Comment: