ನೆರೆ ಹಾವಳಿ ಪ್ರದೇಶಕ್ಕೆ ಜಿ‌.ನ್ಯಾಯಾಧೀಶರಾದ ನೂರುನ್ನಿಸಾ ಭೇಟಿ


ಕುಶಾಲನಗರ,: ಕುಶಾಲನಗರದ ನೆರೆ ಹಾವಳಿ ಪ್ರದೇಶಗಳಿಗೆ ಕೊಡಗು ಜಿಲ್ಲಾ ನ್ಯಾಯಾಧೀಶರಾದ ನೂರುನ್ನಿಸಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೈಕೋರ್ಟ್ ಆದೇಶದ ಮೇರೆಗೆ ಭೇಟಿ ನೀಡಿದ ನ್ಯಾಯಾಧೀಶರು, ಕುಶಾಲನಗರದ ಸಾಯಿ ಬಡಾವಣೆ, ಕುವೆಂಪು ಬಡಾವಣೆ, ದಂಡಿನಪೇಟೆ, ಇಂದಿನಾ ಬಡಾವಣೆ ಸೇರಿದಂತೆ ಹಲವೆಡೆ ತೆರಳಿ ಪರಿಶೀಲನೆ ನಡೆಸಿದರು. ನಂತರ ಪತ್ರಕರ್ತರೊಡನೆ ಮಾತನಾಡಿದ ಅವರು, ಹೈಕೋರ್ಟ್ ಆದೇಶದಂತೆ ಜಿಲ್ಲಾಧ್ಯಂತ ನೆರೆಹಾವಳಿ ಪ್ರದೇಶಗಳಿಗೆ ಭೇಟಿ ನೀಡಿದ್ದು, ಜಿಲ್ಲಾಡಳಿತ ಸಂತ್ರಸ್ತರಿಗೆ ಸೂಕ್ತ ಸೌಲಭ್ಯಗಳನ್ನು ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು. ನಂತರ ನ್ಯಾಯಾಧೀಶರು ಕುಶಾಲನಗರ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದರು. ಈ ಸಂದರ್ಭ ಅಧಿಕಾರಿಗಳ ತಂಡ ಹಾಗೂ ನಮ್ಮ ಕೊಡಗು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Previous Post
Next Post

0 Post a Comment: