ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ


ಮಡಿಕೇರಿ ಆ.23(ಕರ್ನಾಟಕ ವಾರ್ತೆ):-ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇರುವ ಸಿ.ಪಿ.ಸಿ/ಎ.ಪಿ.ಸಿ. ಮತ್ತು ಮಹಿಳಾ ಪಿ.ಸಿ. ಹುದ್ದೆಯ ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿಯು ಆಗಸ್ಟ್, 19 ರಂದು ಕೊಡಗು ಜಿಲ್ಲಾ ಪೊಲೀಸ್ ನೇಮಕಾತಿ ಸಮಿತಿ ಸದಸ್ಯರ ಸಮ್ಮುಖದಲ್ಲಿ ತಯಾರಿಸಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳ ಗಮನಕ್ಕಾಗಿ ಜಿಲ್ಲಾ ಪೊಲೀಸ್ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ವೈದ್ಯಕೀಯ ಮತ್ತು ಮೂಲ ದಾಖಲಾತಿ ಪರಿಶೀಲನೆಗಾಗಿ ದಿನ ನಿಗದಿಪಡಿಸಲಾಗಿದ್ದು ಅಭ್ಯರ್ಥಿಗಳಿಗೆ ಅಂಚೆ ಮೂಲಕ ಪತ್ರವನ್ನು ಕಳುಹಿಸಲಾಗಿದ್ದು, ನಿಗದಿತ ದಿನಾಂಕಗಳಂದು(2019ರ ಸೆಪ್ಟೆಂಬರ್, 3, 4 ಮತ್ತು 5 ರಂದು) ತಪ್ಪದೆ ವೈದ್ಯಕೀಯ ಪರೀಕ್ಷೆ ಮತ್ತು ಮೂಲ ದಾಖಲಾತಿ ಪರಿಶೀಲನೆಗಾಗಿ ಹಾಜರಾಗುವಂತೆ ಪೊಲೀಸ್ ನೇಮಕಾತಿ ಸಮಿತಿಯ ಅಧ್ಯಕ್ಷರು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಅವರು ತಿಳಿಸಿದ್ದಾರೆ. ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್, 26 ರಂದು ವಿರಾಜಪೇಟೆ ತಹಶೀಲ್ದಾರ್ ಕಚೇರಿ ಸಭಾಂಗಣ, ಆಗಸ್ಟ್, 27 ರಂದು ಸೋಮವಾರಪೇಟೆ ತಹಶೀಲ್ದಾರ್ ಕಚೇರಿ ಆವರಣ, ಆಗಸ್ಟ್ 28 ರಂದು ನಗರದ ಗೌಳಿಬೀದಿ ಲೋಕಾಯುಕ್ತ ಕಚೇರಿಯಲ್ಲಿ ಆಯಾಯ ದಿನಗಳಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ದೂರು ಅರ್ಜಿ ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ, ನೌಕರರ ವಿರುದ್ದ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಠಾಣೆ, ಗೌಳಿಬೀದಿ, ಮಡಿಕೇರಿ 08272-220797 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ. ವಾಹನ ಮುಟ್ಟುಗೋಲು ಮಡಿಕೇರಿ ಆ.23(ಕರ್ನಾಟಕ ವಾರ್ತೆ):-ಕುಶಾಲನಗರ ವಲಯ ಅರಣ್ಯಾಧಿಕಾರಿ ಅವರು ಸೊತ್ತಿನ ಸಮೇತ ಅಶೋಕ ಲೈಲ್ಯಾಂಡ್ ವಾಹನ ಕೆಎಲ್ 58 ಡಬ್ಲ್ಯೂ 9863 ವಾಹನವನ್ನು ಸರ್ಕಾರ ಪರ ಅಮಾನತ್ತು ಪಡಿಸಿದ್ದು, ಕರ್ನಾಟಕ ಅರಣ್ಯ ಕಾಯ್ದೆ (ಅಧಿನಿಯಮ 2ನೇ ತಿದ್ದುಪಡಿ) 1963ರ ಸೆಕ್ಷನ್ 71(ಎ) ಯಿಂದ (ಜೆ) ಪ್ರಕಾರ ವಿಚಾರಣೆ ನಡೆಸಿ ವಾಹನ ಮತ್ತು ಸೊತ್ತನ್ನು ಸರ್ಕಾರದ ಪರ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಈ ವಾಹನದ ಬಗ್ಗೆ ಯಾರಿಂದಲೂ ಈವರೆಗೂ ಹಕ್ಕುಭಾದ್ಯತೆ ಇರುವುದಿಲ್ಲ. ಆದ್ದರಿಂದ ವಾಹನದ ನಿಜವಾದ ಮಾಲೀಕರು ಯಾರಾದರೂ ಇದ್ದಲ್ಲಿ ಅಂತಹ ವ್ಯಕ್ತಿಗಳು ಮಾಲೀಕತ್ವದ ಪೂರ್ಣ ದಾಖಲಾತಿಗಳೊಂದಿಗೆ 30 ದಿನಗಳೊಳಗೆ ಪ್ರಾಧಿಕಾರಿ ಅಧಿಕಾರಿಗಳ ಮುಂದೆ ಹಾಜರಾಗಿ ತಮ್ಮ ಮಾಲೀಕತ್ವದ ಹಕ್ಕು ಭಾದ್ಯತೆಯನ್ನು ರುಜುವಾತು ಪಡಿಸಬೇಕು ಹಾಗೂ ಈ ವಾಹನದ ಮಾಲೀಕರು ಅಥವಾ ಅವರ ಪ್ರತಿನಿಧಿಗಳು ವಾಹನವು ಅರಣ್ಯ ಅಪರಾಧದಲ್ಲಿ ಭಾಗಿಯಾಗಿಲ್ಲವೆಂದು ರುಜುವಾತು ಪಡಿಸಬೇಕು. ನಿಗಧಿತ ಅವಧಿಯೊಳಗೆ ಯಾರಿಂದಲೂ ಯಾವುದೇ ಅಹವಾಲು ಬಾರದೇ ಇದ್ದಲ್ಲಿ ವಾಹನವನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅಧಿಕೃತ ಅಧಿಕಾರಿ ಎಸ್.ಪ್ರಭಾಕರನ್ ಅವರು ತಿಳಿಸಿದ್ದಾರೆ.
Previous Post
Next Post

0 Post a Comment: