ಚಿತ್ರ ; ಸಾಂಧರ್ಭಿಕ
ಮಡಿಕೇರಿ ಆ.11(ಕರ್ನಾಟಕ ವಾರ್ತೆ):-ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವ್ಯಾಪ್ತಿಗೆ ಒಳಪಡುವ ಜಿಲ್ಲೆಯಲ್ಲಿ ಇತ್ತಿಚಿನ ದಿನಗಳಲ್ಲಿ ಮಳೆಯಾಗುತ್ತಿರುವುದರಿಂದ ಹೊಳೆ, ನದಿಗಳು ಉಕ್ಕಿ ಹರಿಯುತ್ತಿದ್ದು, ಕೆರೆ ಅಣೆಕಟ್ಟುಗಳು ತುಂಬುತ್ತಿವೆ. ಹಲವಾರು ಕಡೆ ರಸ್ತೆ ಸಂಪರ್ಕಗಳು ಕಡಿತಗೊಂಡಿದ್ದು, ವಿದ್ಯುತ್ ಸಂಪರ್ಕದಲ್ಲಿ ಸಹ ಹೆಚ್ಚಿನ ಪ್ರಮಾಣದ ಅಡಚಣೆ ಉಂಟಾಗಿದೆ. ಹಲವು ಕಡೆ ಕಂಬಗಳು, ವಿದ್ಯುತ್ ಪರಿವರ್ತಕಗಳು ಮುರಿದು ಬಿದ್ದಿದ್ದು ಹಾಗೂ ವಿದ್ಯುತ್ ಮಾರ್ಗಗಳ ಸಮನಾಂತರಕ್ಕೆ ನೀರಿನ ಹರಿವು ಇರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಅಡಚಣೆ ಉಂಟಾಗಿದೆ. ಕೆಲವೊಂದು ಕಡೆಗಳಲ್ಲಿ ಮಳೆಯ ಪ್ರಮಾಣ ಗಮನದಲ್ಲಿಟ್ಟುಕೊಂಡು ಮುನ್ನೇಚ್ಚರಿಕೆ ಕ್ರಮವಾಗಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗಿದೆ. ಹೆಚ್ಚು ಹಾನಿಗೊಳಗಾಗಿರುವ ಪ್ರದೇಶಗಳಿಗೆ ಬೇರೆ ಸ್ಥಳಗಳಿಂದ ಈಗಾಗಲೇ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಪ್ರವಾಹವು ಇಳಿಮುಖವಾಗಿರುವ ಪ್ರದೇಶಗಳಲ್ಲಿ ಈಗಾಗಲೇ ದುರಸ್ತಿ ಕಾರ್ಯ ಕೈಗೆತ್ತಿಗೊಂಡಿದೆ. ಆ ದಿಸೆಯಲ್ಲಿ ವಿದ್ಯುತ್ ಸರಬರಾಜು ಸಂಬಂಧಿಸಿದಂತೆ ನಿಗಮ ವ್ಯಾಪ್ತಿಗೆ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ವಿವರ ಇಂತಿದೆ. ಕೊಡಗು-ಚಾಮರಾಜನಗರ ಜಿಲ್ಲೆಗಳ ಅಧೀಕ್ಷಕ ಎಂಜಿನಿಯರ್ ಕೆ.ಎಂ.ಮಹದೇವಸ್ವಾಮಿ ಪ್ರಸನ್ನ (9449598533). ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕಿಗೆ ಕಾರ್ಯಪಾಲಕ ಎಂಜಿನಿಯರ್ ಬಿ. ಸೋಮಶೇಖರ್ (9449598601) ನೇಮಿಸಲಾಗಿದೆ. ಸಾರ್ವಜನಿಕರು ವಿದ್ಯುತ್ ಸರಬರಾಜು ಸಮಸ್ಯೆಗಳಿಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಪ್ರಧಾನ ವ್ಯವಸ್ಥಾಪಕರು ತಿಳಿಸಿದ್ದಾರೆ.

0 Post a Comment: