ಪ್ರಶಸ್ತಿಗೆ ಅರ್ಜಿ ಆಹ್ವಾನ


ಟೈಮ್ಸ್ ಆಫ್ ಕೂರ್ಗ್: ಕರ್ನಾಟಕ ಸರ್ಕಾರವು ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ.25 ಸಾವಿರಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ. 1 ಲಕ್ಷ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ಪ್ರದಾನ ಮಾಡಿ ಗೌರವಿಸುತ್ತದೆ. 2019ನೇ ಸಾಲಿನ ಪ್ರಶಸ್ತಿಗಾಗಿ ನಿಗದಿಪಡಿಸಿರುವ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ದ್ವಿಪ್ರತಿಯಲ್ಲಿ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ, ದೂರವಾಣಿ 08272-298379 ಈ ವಿಳಾಸಕ್ಕೆ ಆಗಸ್ಟ್, 31 ರೊಳಗೆ ಸಲ್ಲಿಸತಕ್ಕದ್ದು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ
Previous Post
Next Post

0 Post a Comment: