ಮಂಗಳೂರು: ಉಪ್ಪಿನಂಗಡಿಯಲ್ಲಿರುವ ಚಿನ್ನಾಭರಣ ಮಳಿಗೆಯೊಂದಕ್ಕೆ ನುಗ್ಗಿರುವ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಇಲ್ಲಿನ ಆರ್.ಕೆ. ಜುವೆಲ್ಲರ್ಸ್ ನಿಂದ ಈ ಕಳ್ಳತನ ನಡೆದಿದೆ. ಕಳೆದ ರಾತ್ರಿ ಈ ದರೋಡೆ ನಡೆದಿದೆ. ಚಿನ್ನದ ಅಂಗಡಿಯ ಶೆಟರ್ ನ ಬೀಗವನ್ನು ಗ್ಯಾಸ್ ಕಟರ್ ಮೂಲಕ ತುಂಡು ಮಾಡಲಾಗಿದೆ. ಬಳಿಕ ಒಳನುಗ್ಗಿರುವ ಕಳ್ಳರು ಅಂದಾಜು ಸುಮಾರು 25 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದಾರೆ ಎಂದು ಹೇಳಲಾಗುತ್ತಿದೆ.
ಕಳವಾಗಿರುವ ಒಟ್ಟು ಸೊತ್ತುಗಳ ವೌಲ್ಯ ಇನ್ನು ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ತನಿಖೆ ನಡೆಸುತ್ತಿದ್ದಾರೆ.


0 Post a Comment: