ಕಾಡಾನೆ ದಾಳಿ ಕಾರ್ಮಿಕನಿಗೆ ಗಂಭೀರ ಗಾಯ : ಪಾಲಿಬೆಟ್ಟ ಖಾಸಗಿ ಕಾಫಿ ತೋಟದಲ್ಲಿ ಘಟನೆ 


ಮಡಿಕೇರಿ:ತೋಟ ಕೆಲಸಕ್ಕೆ ತೆರಳಿದ ಕಾರ್ಮಿಕ ಮರ್ದಯ್ (50)ಕಾಡಾನೆ ದಾಳಿಗೆ ಸಿಲುಕಿ ಗಂಭೀರ ಗಾಯಗೊಂಡು ಸಿದ್ದಾಪುರ ಸಮೀಪದ ಪಾಲಿಪೆಟ್ಟದಲ್ಲಿ ನಡೆದಿದೆ‌. ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಪಡೆದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಗುರುವಾರ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭ ಹಠಾತ್ತನೆ ಬಂದ ಕಾಡಾನೆಯೊಂದು ದಾಳಿ ಮಾಡಿ ಗಾಯಗೊಳಿಸಿದೆ.
Previous Post
Next Post

0 Post a Comment: