ವಿರಾಜಪೇಟೆ: ಜಿಲ್ಲಾಧಿಕಾರಿ ಅನ್ನೀಸ್ ಕೆ ಜಾಯ್ ಹಾಗೂ ಭಾರತೀಯ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳು ವಿರಾಜಪೇಟೆಯ ಮಲೆತಿರಿಕೆ ಬೆಟ್ಟಕ್ಕೆ ಭೇಟಿ ನೀಡಿ ಭೂಮಿ ಬಿರುಕು ಬಿಟ್ಟಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು. ಬಳಿಕ ಭಾರತೀಯ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳ ನಿರ್ದೇಶನದಂತೆ ಭೂಮಿ ಬಿರುಕು ಬಿಟ್ಟಿರುವ ಪ್ರದೇಶದ ಸಮೀಪದ ನಿವಾಸಿಗಳು ಆಗಸ್ಟ್ 30 ರವರೆಗೆ ಸುರಕ್ಷಿತ ಸ್ಥಳದಲ್ಲಿ ಇರುವಂತೆ ಮನವಿ ಮಾಡಿದರು. ನಂತರ ಹುದಿಕೇರಿ ಹಾಗೂ ಶ್ರೀಮಂಗಲ ಹೋಬಳಿ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ರಸ್ತೆ ಹಾಗೂ ಮನೆಗಳನ್ನು ಕಂದಾಯ, ಪೊಲೀಸ್ ಹಾಗೂ ಇತರೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದರು.
ಬಿರುಕು ಬಿಟ್ಟಿದ್ದ ವಿರಾಜಪೇಟೆಯ ಮಲೆತಿರಿಕೆ ಬೆಟ್ಟಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ
Categories:
Featured
ಕೊಡಗು
Publish Date:
August 17, 2019
ವಿರಾಜಪೇಟೆ: ಜಿಲ್ಲಾಧಿಕಾರಿ ಅನ್ನೀಸ್ ಕೆ ಜಾಯ್ ಹಾಗೂ ಭಾರತೀಯ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳು ವಿರಾಜಪೇಟೆಯ ಮಲೆತಿರಿಕೆ ಬೆಟ್ಟಕ್ಕೆ ಭೇಟಿ ನೀಡಿ ಭೂಮಿ ಬಿರುಕು ಬಿಟ್ಟಿರುವ ಸ್ಥಳವನ್ನು ಪರಿಶೀಲನೆ ನಡೆಸಿದರು. ಬಳಿಕ ಭಾರತೀಯ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳ ನಿರ್ದೇಶನದಂತೆ ಭೂಮಿ ಬಿರುಕು ಬಿಟ್ಟಿರುವ ಪ್ರದೇಶದ ಸಮೀಪದ ನಿವಾಸಿಗಳು ಆಗಸ್ಟ್ 30 ರವರೆಗೆ ಸುರಕ್ಷಿತ ಸ್ಥಳದಲ್ಲಿ ಇರುವಂತೆ ಮನವಿ ಮಾಡಿದರು. ನಂತರ ಹುದಿಕೇರಿ ಹಾಗೂ ಶ್ರೀಮಂಗಲ ಹೋಬಳಿ ವ್ಯಾಪ್ತಿಯಲ್ಲಿ ಮಳೆಯಿಂದ ಹಾನಿಗೊಳಗಾದ ರಸ್ತೆ ಹಾಗೂ ಮನೆಗಳನ್ನು ಕಂದಾಯ, ಪೊಲೀಸ್ ಹಾಗೂ ಇತರೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸಿದರು.

0 Post a Comment: