ಪೆರುಂಬಾಡಿ ಯಿಂದ ಮಾಕುಟ್ಟ ವರೆಗೆ ವಾಹನ ಸಂಚಾರ ನಿಷೇಧ


ಟೈಮ್ಸ್ ಆಫ್ ಕೂರ್ಗ್ 
 ಮಡಿಕೇರಿ ಆ.06(ಕರ್ನಾಟಕ ವಾರ್ತೆ):-ಪೆರುಂಬಾಡಿ-ಮಾಕುಟ್ಟ ರಸ್ತೆಯಲ್ಲಿ ಭೂಕುಸಿತ ಉಂಟಾಗಿದ್ದು, ಶೀಘ್ರವಾಗಿ ತಾತ್ಕಾಲಿಕ ದುರಸ್ತಿ ಕಾಮಗಾರಿ ಕೈಗೊಂಡು ಲಘು ವಾಹನಗಳ ಸಂಚಾರಕ್ಕೆ ಯೋಗ್ಯವಾದ ರಸ್ತೆ ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಎಲ್ಲಾ ವಾಹನ ಸಂಚಾರಿಗಳ, ರಸ್ತೆ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005ರ ಕಲಂ 33, 34(ಬಿ),(ಸಿ),(ಡಿ) ಮತ್ತು ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ(5) ರಲ್ಲಿ ದತ್ತವಾದ ಅಧಿಕಾರದಂತೆ ಆಗಸ್ಟ್, 05 ರಿಂದ ಆಗಸ್ಟ್, 08 ರವರೆಗೆ ಪೆರುಂಬಾಡಿಯಿಂದ ಮಾಕುಟ್ಟವರೆಗಿನ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ. ಈ ಅವಧಿಯಲ್ಲಿ ನಿಷೇಧಿತ ರಸ್ತೆಯ ಬದಲಿಗೆ ಪರ್ಯಾಯ ರಸ್ತೆಯಾದ ವಿರಾಜಪೇಟೆ, ಗೋಣಿಕೊಪ್ಪ, ಹುದಿಕೇರಿ, ಕುಟ್ಟ, ತೋಲ್ಪಟ್ಟಿ, ಮಾನಂದವಾಡಿ, ಬಾವಲಿ, ಬಾಯ್ಸ್‍ಟೌನ್, ಕೂತುಪರಂಬು, ಕಣ್ಣನೂರು, ತಲಚೇರಿ ಮಾರ್ಗವಾಗಿ ಸಂಚರಿಸಬಹುದಾಗಿರುತ್ತದೆ. ಈ ಬಗ್ಗೆ ಮೋಟಾರ್ ವಾಹನ ಕಾಯ್ದೆ 1988ರ ಸೆಕ್ಷನ್ 116 ರಂತೆ ಅವಶ್ಯವಿರುವ ಸಂಜ್ಞೆ/ಸೂಚನಾ ಫಲಕವನ್ನು ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಅನುಮತಿ ನೀಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
Previous Post
Next Post

0 Post a Comment: