ಮಡಿಕೇರಿ ಆ.30(ಕರ್ನಾಟಕ ವಾರ್ತೆ):-ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್, ಐಪಿಎಸ್, ಪರೀಕ್ಷೆಗೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಮತ್ತು ಇತರ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ತರಬೇತಿ ನೀಡಲಾಗುತ್ತದೆ. ಆಸಕ್ತರು ಸೆಪ್ಟೆಂಬರ್, 14 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಚೇರಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂ.ಸಂ.0821-2515944 ನ್ನು ಸಂಪರ್ಕಿಸಬಹುದು ಎಂದು ಕುಲಸಚಿವರಾದ ಪ್ರೊ.ಬಿ.ರಮೇಶ್ ಅವರು ತಿಳಿಸಿದ್ದಾರೆ.
ಐಎಎಸ್ ಹಾಗೂ ಕೆಎಎಸ್ ಪರೀಕ್ಷೆಗೆ ತರಬೇತಿ
Categories:
ಕೊಡಗು
Publish Date:
أغسطس 30, 2019
ಮಡಿಕೇರಿ ಆ.30(ಕರ್ನಾಟಕ ವಾರ್ತೆ):-ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್, ಐಪಿಎಸ್, ಪರೀಕ್ಷೆಗೆ ಹಾಗೂ ಕರ್ನಾಟಕ ಲೋಕಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಮತ್ತು ಇತರ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ತರಬೇತಿ ನೀಡಲಾಗುತ್ತದೆ. ಆಸಕ್ತರು ಸೆಪ್ಟೆಂಬರ್, 14 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಮುಕ್ತಗಂಗೋತ್ರಿ’ ಆವರಣದಲ್ಲಿರುವ ‘ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ದ ಕಚೇರಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ದೂ.ಸಂ.0821-2515944 ನ್ನು ಸಂಪರ್ಕಿಸಬಹುದು ಎಂದು ಕುಲಸಚಿವರಾದ ಪ್ರೊ.ಬಿ.ರಮೇಶ್ ಅವರು ತಿಳಿಸಿದ್ದಾರೆ.

0 Post a Comment: