ಭಾರಿ ವಾಹನಗಳ ಸಂಚಾರ ನಿಷೇಧ 


ಮಡಿಕೇರಿ ಆ.08(ಕರ್ನಾಟಕ ವಾರ್ತೆ):-ಕೊಡಗು ಜಿಲ್ಲೆಯಲ್ಲಿ ಮಳೆ ವ್ಯಾಪಕವಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ ರಸ್ತೆಯ ಪರಿಸ್ಥಿತಿ ಹದಗೆಡುತ್ತಿದ್ದು, ಅಧಿಕ ಭಾರ ತುಂಬಿದ ಭಾರಿ ಸರಕು ಸಾಗಾಣಿಕೆ ವಾಹನಗಳು ದಿನನಿತ್ಯ ಸಂಚರಿಸುವುದರಿಂದ ರಸ್ತೆ ಬದಿ ಭೂಕುಸಿತದಿಂದಾಗಿ ರಸ್ತೆ ಮೇಲೆಯೇ ಮಣ್ಣು ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆಯಾಗಿ ಸಾಕಷ್ಟು ಅಪಘಾತಗಳಿಗೆ ಕಾರಣವಾಗುತ್ತಿದೆ. ಈ ಹಿನ್ನೆಲೆ ಸಾರ್ವಜನಿಕ ಜೀವ ಮತ್ತು ಆಸ್ತಿಗಳ ಹಿತದೃಷ್ಟಿಯಿಂದ ವಾಹನದ ನೋಂದಣಿ ತೂಕ 16,200 ಕೆ.ಜಿ.ಗಿಂತ ಹೆಚ್ಚಿನ ತೂಕದ ಸರಕು ಸಾಗಾಣಿಕೆ ವಾಹನ ಮಲ್ಟಿ ಆಕ್ಸಿಲ್ ಟ್ರಕ್‍ಗಳ ಸಂಚಾರ ಮತ್ತು ಭಾರಿ ವಾಹನಗಳಾದ ಬುಲೆಟ್ ಟ್ಯಾಂಕರ್, ಶಿಫ್ ಕಾರ್ಗೋ ಕಂಟೈನರ್ ಲಾಂಗ್ ಚಾಸಿಸ್(ಮಲ್ಟಿ ಆಕ್ಸಿಲ್) ಮತ್ತು ಮರಳು ಸಾಗಾಣಿಕೆ, ಮರಗಳ ದಿಮ್ಮಿಗಳನ್ನು ಸಾಗಿಸುವ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ಸೆಪ್ಟೆಂಬರ್, 06 ರವರೆಗೆ ಕೊಡಗು ಜಿಲ್ಲೆಯಲ್ಲಿ ಮಳೆಗಾಲ ಮುಗಿಯುವವರೆಗೆ ನಿರ್ಭಂಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ. ಉಳಿದಂತೆ ಜಿಲ್ಲೆಯ ಸಾರ್ವಜನಿಕರ ಅನುಕೂಲಕ್ಕಾಗಿ ಅಡುಗೆ ಅನಿಲ, ಇಂಧನ ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ-ಕಾಲೇಜು ವಾಹನಗಳು, ಸಾರ್ವಜನಿಕ ಪ್ರಯಾಣಿಕರ ಮಲ್ಟಿ ಆಕ್ಸಿಲ್ ಬಸ್ಸುಗಳಿಗೆ ವಿನಾಯಿತಿ ನೀಡಲಾಗಿದೆ.
Previous Post
Next Post

0 Post a Comment: