ಕೊಪ್ಪಳ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿಗಳ ಸಾವು:ತನಿಖೆಗೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ.....


ಕೊಪ್ಪಳ: ನಗರದ ದೇವರಾಜ್ ಅರಸ್ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ 5 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆಯು ಅಧಿಕಾರಿಗಳ ನಿರ್ಲಕ್ಷತೆಯಿಂದ ಸಂಭವಿಸಿದ್ದು ಶೀಘ್ರ ಸಂಬಂಧಪಟ್ಟ ಅಧಿಕಾರಿಗಳನ್ನು ವಜಾಗೋಳಿಸಬೇಕು ಮತ್ತು ಮೃತ ವಿದ್ಯಾರ್ಥಿಗಳ ಕುಟುಂಬದ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಕ್ಯಾಂಪಸ್ ಫ್ರಂಟ್ ಕೊಪ್ಪಳ ಜಿಲ್ಲಾ ಸಮಿತಿ ವತಿಯಿಂದ ಕೊಪ್ಪಳದ ಅಶೋಕ ವೃತದ ಬಳಿ ಪ್ರತಿಭಟನೆ ಮಾಡಲಾಯಿತು..

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಚಾಂದ್ ಸಲ್ಮಾನ್ ಮಾತನಾಡಿ ಐದು ಜನ ವಿದ್ಯಾರ್ಥಿಗಳ ಸಾವಿಗೆ ಕಾರಣರಾದ ಸಂಬಂದ್ದ ಪಟ್ಟ ಅಧಿಕಾರಿಗಳನ್ನು ವಜಾಗೋಳಿಸಬೇಕು, ಕುಟುಂಬಕ್ಕೆ ₹10 ಲಕ್ಷ ಪರಿಹಾರ ಹಾಗೂ ಆ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಬೇಕು. ಹಾಗೂ ಜಿಲ್ಲೆಯಾದ್ಯಂತ ಹಾಸ್ಟೇಲ್ ಗಳಿಗೆ ಸ್ವಂತ ಕಟ್ಟಡ ನೀಡಿಬೇಕು ಎಂದು ಒತ್ತಾಯಿಸಿದರು..

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಚಾಂದ್ ಸಲ್ಮಾನ್ ಜಿಲ್ಲಾ ಕಾರ್ಯದರ್ಶಿಯಾದ ಸೈಯದ್ ಅಲಿ ಮತ್ತು ಕ್ಯಾಂಪಸ್ ಫ್ರಂಟ್ ಜಿಲ್ಲಾ ಸಮಿತಿ ಸದಸ್ಯರಾದ ಜಾಕೀರ್, ಇರ್ಫಾನ್, ಉಪಸ್ಥಿತರಿದ್ದರು...
Previous Post
Next Post

0 Post a Comment: