ಅಮ್ಮತ್ತಿ ಕಾರ್ಮಾಡು ಗ್ರಾಮ ಪಂಚಾಯತಿಯಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ


ವರದಿ : ತೌಸಿಫ್ ಅಹ್ಮದ್ ಅಮ್ಮತ್ತಿ
ಅಮ್ಮತ್ತಿ: ಅಮ್ಮತ್ತಿ ಕಾರ್ಮಾಡು ಗ್ರಾಮ ಪಂಚಾಯತಿಯಲ್ಲಿ ಗ್ರಾಮಸ್ಥರಿಗೆ ಸಿಹಿ ಹಂಚುವ ಮೂಲಕ ದೇಶದ 73ನೇ ಸ್ವಾತಂತ್ರ್ಯ ದಿನವನ್ನು ಆಚರಿಸಲಾಯಿತು. ಗ್ರಾಮ ಪಂಚಾಯತಿ ಅದ್ಯಕ್ಷರಾದ ರೋನಾ ಭೀಮಯ್ಯ ಅವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಗ್ರಾಮ ಪಂಚಾಯತಿ ಸದಸ್ಯರಾದ ಮುಕ್ಕಾಟಿರ ಸಂತೋಶ್ ಅವರು ದೇಶದ ಜೊತೆಗೆ ದೇಶೀಯರ ಮನಸ್ಸು ಸ್ವಚ್ಚವಾಗಬೇಕು , ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 73 ವರ್ಷಗಳೆ ಕಳೆದು ಹೋದರೂ ವೈಯಕ್ತಿಕ ಸ್ವಾತಂತ್ರ್ಯದಿಂದ ಹಲವರು ವಂಚಿತರಾಗಿದಾರೆ , ಇದು ಬದಲಾಗಬೇಕು ಎಂದರು. ನಂತರ ಮಾತನಾಡಿದ ಪಂಚಾಯತಿ ಅಭಿವೃದ್ಧಿ ಅಧಿಕಾರಿ ತಿಮ್ಮಯ್ಯ ಅವರು ಇಂದಿನ ದಿನ ಪ್ರತಿಯೊಬ್ಬ ಭಾರತೀಯನೂ ಸಂಭ್ರಮಿಸಬೇಕಾದ ದಿನ ನಾವು ಕೂಡ ಅದರ ಭಾಗಿಯಾಗೋಣ ಎಂದರು. ತದನಂತರ ನೆರೆದಿದ್ದ ಸರ್ವರಿಗೂ ಸಿಹಿ ಹಂಚಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ಹಂಸ , ಸುರೇಶ್ , ನಿರಣ್ , ಸುರೇಶ್ ಅಯ್ಯಪ್ಪ ಹಾಗು ಗ್ರಾಮಸ್ಥರು ಉಪಸ್ಥಿತರಿದ್ದರು.

Previous Post
Next Post

0 Post a Comment: