ಕೊಡಗಿನಲ್ಲಿ ತೀವ್ರತೆ ಪಡೆದ ಮಳೆ:ಪೆರಂಬಾಡಿಯಿಂದ ಮಾಕುಟ್ಟದವರೆಗೆ ವಾಹನ ಸಂಚಾರ ನಿಷೇಧ.


ಟೈಮ್ಸ್ ಆಫ್ ಕೂರ್ಗ್ 
 ಮಡಿಕೇರಿ,: ದಕ್ಷಿಣ ಕೊಡಗಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ರಸ್ತೆ ಹಾಗೂ ಸೇತುವೆಗಳಿಗೆ ಹಾನಿಯಾಗಿದೆ. ವಿರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಭಾಗ ಕುಸಿದಿದ್ದು, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸ್ಥಳ ಪರಿಶೀಲನೆ ನಡೆಸಿದರು. ತಹಶೀಲ್ದಾರ್, ಲೋಕೋಪಯೋಗಿ ಇಂಜಿನಿಯರ್ ಹಾಗೂ ಸ್ಥಳೀಯ ಅಧಿಕಾರಿಗಳು ಈ ಸಂದರ್ಭ ಹಾಜರಿದ್ದರು. ರಸ್ತೆಯನ್ನು ತಾತ್ಕಾಲಿಕವಾಗಿ ದುರಸ್ತಿಪಡಿಸುವ ಉದ್ಧೇಶದಿಂದ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮೂರು ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್ ನಿಂದ ಮಾಕುಟ್ಟ ಚೆಕ್ ಪೋಸ್ಟ್ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿದ ನಂತರ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಮುಕ್ತಗೊಳಿಸಿ, ಶಾಶ್ವತವಾಗಿ ರಸ್ತೆಯನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿರುವ ಜಿಲ್ಲಾಧಿಕಾರಿಗಳು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ. ಭಾಗಮಂಡಲಕ್ಕೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ : ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ಸೋಮವಾರ ಭಾಗಮಂಡಲಕ್ಕೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು. ರಕ್ಷಣಾ ತಂಡಗಳು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿದರು. ಬಳಿಕ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ಭಾಗಮಂಡಲ ದೇವಾಲಯ ವ್ಯವಸ್ಥಾಪನಾ ಸಮಿತಿ ಸಭೆ ನಡೆಸಿದರು. ವಿವಿಧ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು. ಮತ್ತೇ ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ಘೋಷಣೆ:. ಜಿಲ್ಲೆಯಲ್ಲಿ ದಿನಾಂಕ ೫ರಿಂದ ೭ರ ಬೆಳಿಗ್ಗೆವರೆಗೆ , ೧೧೫ ಮಿ.ಮೀ ನಿಂದ ೨೦೪ ಮಿಮೀ ಭಾರಿ ಮಳೆ ಸಾಧ್ಯತೆಯಿರುವುದರಿಂದ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಅದಲ್ಲದೇ ಮತ್ತೇ ದಿನಾಂಕ ೭ ರಿಂದ ೯ರವರೆಗೆ ೨೦೪ ಮಿ.ಮೀಗಿಂತ ಅಧಿಕ ಮಳೆ ಬೀಳುವ ಸಾಧ್ಯತೆಯ ಇರುವುದರಿಂದ ರೆಟ್ ಅಲರ್ಟ್ ಘೋಷಣೆ ಮಾಡಿದೆ. ಹಾಗೂ ೯ರ ಬೆಳಿಗ್ಗಿನಿಂದ ಆಗಸ್ಟ್ರಂದು ೧೦ರ ಬೆಳಿಗ್ಗಿನವರೆಗೆ ಪುನಜಹ ಆರೆಂಜ್ ಅಲರ್ಟ್ ಎಂದು ಭಾರತೀಯ ಹವಮಾಮ ಇಲಾಖೆ ತಿಳಿಸಿದೆ. ಆದ್ದರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದ್ದಾರೆ.ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ೨೪ ಚಾಲ್ತಿಯಲ್ಲಿರುವ ಕಂಟ್ರೋಲ್ ರೂಂ ನಂಬರ್ ೦೮೨೭೨- ೨೨೧೦೭೭ ಸಂಖ್ಯೆಯನ್ನು ಸಂಪರ್ಕಿಸಲು ತಿಳಿಸಿದ್ದಾರೆ. ಜಿಲ್ಲೆಯ ಮಳೆ ವಿವರ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 62.88 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 8.15 ಮಿ.ಮೀ. ಮಳೆಯಾಗಿತ್ತು. ವಿರಾಜಪೇಟೆ ತಾಲ್ಲೂಕಿನಲ್ಲಿ ಸರಾಸರಿ ಮಳೆ 57.62 ಮಿ.ಮೀ. ಮಳೆಯಾಗಿದೆ. . ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 80.80 ಮಿ.ಮೀ. ಕಳೆದ ವರ್ಷ ಇದೇ ದಿನ 19.90 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದು ಸರಾಸರಿ ಮಳೆ 50.23 ಮಿ.ಮೀ. ಮಳೆಯಾಗಿದೆ. ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ: 62.40, ನಾಪೋಕ್ಲು 62.20, ಸಂಪಾಜೆ 44.20, ಭಾಗಮಂಡಲ 154.40, ವಿರಾಜಪೇಟೆ ಕಸಬಾ 69.40, ಹುದಿಕೇರಿ 48.20, ಶ್ರೀಮಂಗಲ 43.20, ಪೊನ್ನಂಪೇಟೆ 100.20, ಅಮ್ಮತ್ತಿ 36.50, ಬಾಳೆಲೆ 48.24, ಸೋಮವಾರಪೇಟೆ ಕಸಬಾ: 52.40, ಶನಿವಾರಸಂತೆ 34, ಶಾಂತಳ್ಳಿ 115.20, ಕೊಡ್ಲಿಪೇಟೆ 62.80, ಕುಶಾಲನಗರ 12, ಸುಂಟಿಕೊಪ್ಪ 25 ಮಿ.ಮೀ. ಮಳೆಯಾಗಿದೆ.

Previous Post
Next Post

0 Post a Comment: