ಮಡಿಕೇರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಹಾಮಳೆಯಿಂದಾಗಿ ಭೂ ಕುಸಿತಕ್ಕೆ ಐವರು ಬಲಿಯಾಗಿದ್ದಾರೆ. ಭಾಗಮಂಡಲ ಸಮೀಪದ ಕೋರಂಗಾಲದಲ್ಲಿ ಈ ದುರ್ಘಟನೆ ಸಂಭವಿಸಿದೆ. ಭೂ ಕುಸಿತಕ್ಕೆ ಸಿಲುಕಿ ಕಣ್ಮರೆಯಾಗಿದ್ದ ಐವರ ಪೈಕಿ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ. ಇನ್ನೊಬ್ಬರ ಮೃತದೇಹ ಪತ್ತೆಯಾಗಬೇಕಿದೆ. ಅತ್ತೇಡಿ ಮತ್ತು ಕಾಳನ ಕುಟುಂಬಕ್ಕೆ ಸೇರಿದ ವ್ಯಕ್ತಿಗಳು ಭೂಕುಸಿತಕ್ಕೆ ಸಿಲುಕಿ ಪ್ರಾಣ ತೆತ್ತವರೆಂದು ತಿಳಿದುಬಂದಿದೆ. ಭಾಗಮಂಡಲ ಸಮೀಪದ ಕೋರಂಗಾಲದಲ್ಲಿ ಈ ಘಟನೆ ಸಂಭವಿಸಿದೆ. ಈ ನಡುವೆ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಘಟನೆ ನಡೆದ ಸ್ಥಳಕ್ಕೆ ತೆರಳಾಗದ ಇಕ್ಕಟ್ಟಿನ ಪರಿಸ್ಥಿತಿ ನಿರ್ಮಾಣವಾಗಿದೆ. ಭೂ ಕುಸಿತಕ್ಕೆ ಸಿಲುಕಿ ಮೃತರಾದವರ ಪೈಕಿ ನಾಲ್ವರ ಮೃತದೇಹ ಪತ್ತೆಯಾಗಿದೆ. ಯಶವಂತ ಅತ್ತೇಡಿ, ಬಾಲಕೃಷ್ಣ ಬೋಳನ, ಯಮುನಾ ಬೋಳನಾ ಹಾಗೂ ಉದಯ ಕಾಳನ ಎಂಬುವವರ ಗುರುತು ಪತ್ತೆಯಾಗಿದೆ. ಮೃತರ ಕುಟುಂಬಕ್ಕೆ ಕೇಂದ್ರ ಸಚಿವ ಸದಾನಂದ ಗೌಡ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇನ್ನೊಂದೆಡೆ, ಕೊಡಗು ಜಿಲ್ಲೆಯಲ್ಲಿ ಇದುವರೆಗೆ 25 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. 604 ಕುಟುಂಬಗಳ ಒಟ್ಟು 2136 ಸಂತ್ರಸ್ತರು ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. 58 ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಜಿಲ್ಲೆಯ 14 ಕಡೆಗಳಲ್ಲಿ ಭೂಕುಸಿತ ಮತ್ತು ಪ್ರವಾಹದಿಂದಾಗಿ ಹಲವು ಕಡೆ ಸಾರಿಗೆ, ವಿದ್ಯುತ್ ಹಾಗೂ ಮೊಬೈಲ್ ಸಂಪರ್ಕ ಕಡಿತಗೊಂಡಿದೆ.
ಕೊಡಗಿನಲ್ಲಿ ಭೂಕುಸಿತ : ಐವರ ದುರ್ಮರಣ ; ಸಾರಿಗೆ ವಿದ್ಯುತ್ ಮೊಬೈಲ್ ಸಂಪರ್ಕ ಕಡಿತ
Categories:
Featured
ಕೊಡಗು
ರಾಜ್ಯ ಸುದ್ದಿ
Publish Date:
August 09, 2019
ಮಡಿಕೇರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಹಾಮಳೆಯಿಂದಾಗಿ ಭೂ ಕುಸಿತಕ್ಕೆ ಐವರು ಬಲಿಯಾಗಿದ್ದಾರೆ. ಭಾಗಮಂಡಲ ಸಮೀಪದ ಕೋರಂಗಾಲದಲ್ಲಿ ಈ ದುರ್ಘಟನೆ ಸಂಭವಿಸಿದೆ. ಭೂ ಕುಸಿತಕ್ಕೆ ಸಿಲುಕಿ ಕಣ್ಮರೆಯಾಗಿದ್ದ ಐವರ ಪೈಕಿ ನಾಲ್ವರು ಶವವಾಗಿ ಪತ್ತೆಯಾಗಿದ್ದಾರೆ. ಇನ್ನೊಬ್ಬರ ಮೃತದೇಹ ಪತ್ತೆಯಾಗಬೇಕಿದೆ. ಅತ್ತೇಡಿ ಮತ್ತು ಕಾಳನ ಕುಟುಂಬಕ್ಕೆ ಸೇರಿದ ವ್ಯಕ್ತಿಗಳು ಭೂಕುಸಿತಕ್ಕೆ ಸಿಲುಕಿ ಪ್ರಾಣ ತೆತ್ತವರೆಂದು ತಿಳಿದುಬಂದಿದೆ. ಭಾಗಮಂಡಲ ಸಮೀಪದ ಕೋರಂಗಾಲದಲ್ಲಿ ಈ ಘಟನೆ ಸಂಭವಿಸಿದೆ. ಈ ನಡುವೆ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಘಟನೆ ನಡೆದ ಸ್ಥಳಕ್ಕೆ ತೆರಳಾಗದ ಇಕ್ಕಟ್ಟಿನ ಪರಿಸ್ಥಿತಿ ನಿರ್ಮಾಣವಾಗಿದೆ. ಭೂ ಕುಸಿತಕ್ಕೆ ಸಿಲುಕಿ ಮೃತರಾದವರ ಪೈಕಿ ನಾಲ್ವರ ಮೃತದೇಹ ಪತ್ತೆಯಾಗಿದೆ. ಯಶವಂತ ಅತ್ತೇಡಿ, ಬಾಲಕೃಷ್ಣ ಬೋಳನ, ಯಮುನಾ ಬೋಳನಾ ಹಾಗೂ ಉದಯ ಕಾಳನ ಎಂಬುವವರ ಗುರುತು ಪತ್ತೆಯಾಗಿದೆ. ಮೃತರ ಕುಟುಂಬಕ್ಕೆ ಕೇಂದ್ರ ಸಚಿವ ಸದಾನಂದ ಗೌಡ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇನ್ನೊಂದೆಡೆ, ಕೊಡಗು ಜಿಲ್ಲೆಯಲ್ಲಿ ಇದುವರೆಗೆ 25 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ. 604 ಕುಟುಂಬಗಳ ಒಟ್ಟು 2136 ಸಂತ್ರಸ್ತರು ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ. 58 ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಜಿಲ್ಲೆಯ 14 ಕಡೆಗಳಲ್ಲಿ ಭೂಕುಸಿತ ಮತ್ತು ಪ್ರವಾಹದಿಂದಾಗಿ ಹಲವು ಕಡೆ ಸಾರಿಗೆ, ವಿದ್ಯುತ್ ಹಾಗೂ ಮೊಬೈಲ್ ಸಂಪರ್ಕ ಕಡಿತಗೊಂಡಿದೆ.

0 Post a Comment: