ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲಾ ಬಾಲ ಭವನ ಸಮಿತಿ ಇಲ್ಲಿ ಗೌರವಧನ ಆಧಾರದ ಮೇಲೆ ಸಿಬ್ಬಂದಿ ನೇಮಕ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯು 2019-20ನೇ ಸಾಲಿಗೆ ತಾತ್ಕಾಲಿಕವಾಗಿದ್ದು 2020ರ ಫೆಬ್ರವರಿ, 28ಕ್ಕೆ ಕೊನೆಗೊಳ್ಳುತ್ತದೆ. ಕಚೇರಿ ಸಹಾಯಕರು-1 ಹುದ್ದೆ. ಪಿ.ಯು.ಸಿ ಮತ್ತು ಮೇಲ್ಪಟ್ಟ ವಿದ್ಯಾರ್ಹತೆ ಕಂಪ್ಯೂಟರ್ ಬಳಕೆಯಲ್ಲಿ ಪರಿಣತಿ ಹೊಂದಿರಬೇಕು, ಚಿತ್ರಕಲೆ,ನಾಟಕ, ಸಂಗೀತ, ಕರಕುಶಲ ಕಲೆ, ಯಾವುದಾರೊಂದು ಕ್ಷೇತ್ರದಲ್ಲಿ ಪರಿಣತಿ ಹೊಂದಿರಬೇಕು. ಇಲಾಖೆಯಲ್ಲಿ ಕೆಲಸ ನಿರ್ವಹಿಸಿದ ಅನುಭವವಿದ್ದವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಅರ್ಜಿದಾರರು ಅರ್ಜಿಯನ್ನು ಸೂಕ್ತ ದಾಖಲಾತಿಗಳೊಂದಿಗೆ ಆಗಸ್ಟ್, 19 ರಂದು ಸಂಜೆ 4 ಗಂಟೆಯೊಳಗೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್ ಗೇಟ್ ಬಳಿ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ಇವರಿಗೆ ಎಲ್ಲಾ ವಿದ್ಯಾರ್ಹತೆಯ ದಾಖಲೆಗಳೊಡನೆ ಕಚೇರಿಗೆ ಸಲ್ಲಿಸುವುದು, ಹೆಚ್ಚಿನ ಮಾಹಿತಿಗೆ ಕಚೇರಿಯ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಅರ್ಜಿ ಆಹ್ವಾನ
Categories:
ಕೊಡಗು
Publish Date:
August 09, 2019

0 Post a Comment: