ತಂಬಾಕು ನಿಯಂತ್ರಣ; ಕಾರ್ಯಾಚರಣೆ




ಮಡಿಕೇರಿ ಆ.06(ಕರ್ನಾಟಕ ವಾರ್ತೆ):-ಜಿಲ್ಲಾ ತಂಬಾಕು ನಿಯಂತ್ರಣ ಕೋಶ ವತಿಯಿಂದ ಆಗಸ್ಟ್, 05 ರಂದು ಮಡಿಕೇರಿಯ ಸಂತೆ ಮಾರುಕಟ್ಟೆ ರಸ್ತೆಯಲ್ಲಿ ನಾನಾ ತಂಬಾಕಿನ ಅಂಗಡಿಗಳ ಮೇಲೆ ಮಿಂಚಿನ ಕಾರ್ಯಾಚರಣೆ ನಡೆಸಿದರು.  
ಪಾನ್ ಶಾಪ್, ಹೋಟೆಲ್, ಕಿರಾಣಿ ಅಂಗಡಿಗಳ ಮೇಲೆ ಈ ತಂಡ ಕೋಟ್ಪಾ 2003ರ ದಾಳಿ ನಡೆಸಲಾಯಿತು. ಅಂಗಡಿಗಳಲ್ಲಿ ತಂಬಾಕು ಉತ್ಪನ್ನ ಹಾಗೂ ಗುಟ್ಕಾ ಪ್ಯಾಕೆಟ್‍ಗಳನ್ನು ಬಹಿರಂಗವಾಗಿ ಪ್ರದರ್ಶಿಸಿ ಮಾರಾಟ ಮಾಡುತ್ತಿರುವುದು ಕಂಡು ಬಂದು ಇದಕ್ಕೆ ಕಡಿವಾಣ ಹಾಕಲು ಅಂಗಡಿಗಳ ಮಾಲೀಕರಿಗೆ ಎಚ್ಚರಿಕೆ ನೀಡಿ ನೋಟೀಸ್ ಜಾರಿ ಮಾಡಲಾಗಿದೆ ಮತ್ತು ಕಾನೂನು ಉಲ್ಲಂಘನೆ ಮಾಡಿದವರ ವಿರುದ್ದ ದಂಡ ವಿಧಿಸಲಾಯಿತು. 
ಹೋಟೆಲ್, ಬಾರ್, ಅಂಗಡಿ ಮತ್ತು ಪಾನ್ ಶಾಪ್‍ಗಳಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ ಮತ್ತು 18 ವಯಸ್ಸಿನ ಒಳಗಿನ ಮಕ್ಕಳು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಅಪರಾಧ ಬಗ್ಗೆ ನಾಮಫಲಕ ಹಾಕುವುದು ಕಡ್ಡಾಯವಾಗಿದೆ. ಶಿಕ್ಷಣ ಸಂಸ್ಥೆಗಳ 100 ಗಜಗಳ ಅಂತರದಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ನಿಷೇಧ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. (ಶಾಲೆ ಮತ್ತು ಕಾಲೇಜುಗಳ ಅವರಣದಿಂದ 100 ಗಜಗಳ ಅಂತರದ ಒಳಗಡೆ ಇರುವ ಅಂಗಡಿಗಳಿಗೆ ಕಾನೂನಿನ ಸಲಹೆ ಮತ್ತು ದಂಡ ವಿಧಿಸುವುದರ ಮುಖಾಂತರ ತಂಬಾಕು ಮಾರಾಟವನ್ನು ತೆರವುಗೊಳಿಸಲಾಯಿತು) ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಪ್ಯಾಕುಗಳ ಮೇಲೆ ಶೇ.85 ರಷ್ಟು ಅರೋಗ್ಯದ ಎಚ್ಚರಿಕೆ ಸಂದೇಶಗಳಿಲ್ಲದೆ ಮಾರಾಟ ಮಾಡುವುದರ ಮೇಲೆ ನಿಷೇಧ.
ಯಾರಿಗೂ ಅಂಗಡಿ ಮುಂದೆ ಧೂಮಪಾನ ಮಾಡಲು ಅವಕಾಶ ನೀಡದೆ ಇರುವುದು. ಬೆಂಕಿ ಪೊಟ್ಟಣ, ಲೈಟರ್ ಮುಂತಾದ ಧೂಮಪಾನಕ್ಕೆ ಉತ್ತೇಜಿಸುವ ವಸ್ತುಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಇಡಬಾರದು. ಅಂಗಡಿಯಲ್ಲಿ ಅಪ್ರಾಪ್ತ ವಯಸ್ಕರನ್ನು ಇರಿಸಿಕೊಳ್ಳುವುದು ಅಪರಾಧ ಎಂದು ತಿಳಿಸಲಾಯಿತು.
ಈ ದಾಳಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ. ಶಿವಕುಮಾರ, ಎಂಟೋಮಾಲಜಿಸ್ಟ್ ಮಂಜುನಾಥ್, ಜಿಲ್ಲಾ ಸಲಹೆಗಾರರಾದ ಪುನೀತ ರಾಣಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಜ ಕಾರ್ಯಕರ್ತರಾದ ಮಂಜುನಾಥ್ ಆರ್. ಮತ್ತು ಪೊಲೀಸ್ ಇಲಾಖೆ ಮತ್ತು ಆರೋಗ್ಯ ಇಲಾಖೆಯವರು ಭಾಗವಹಿಸಿದ್ದರು.
Previous Post
Next Post

0 Post a Comment: