ಮಾಜಿ ಸಚಿವೆ ಸುಷ್ಮಾ ಸ್ವರಾಜ್ ನಿಧನ


ನವದೆಹಲಿ: ಭಾರತದ ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ನಾಯಕಿ ಸುಷ್ಮಾ ಸ್ವರಾಜ್ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. 
ಸುಷ್ಮಾ ಸ್ವರಾಜ್ ಅವರ ಪತಿ ಮತ್ತು ಇತರ ಕುಟುಂಬ ಸದಸ್ಯರು, ಬಿಜೆಪಿ ಮುಖಂಡರಾದ ಡಾ.ಹರ್ಷವರ್ಧನ್ ಮತ್ತು ನಿತಿನ್ ಗಡ್ಕರಿ ಅವರೊಂದಿಗೆ ಏಮ್ಸ್  ಆಸ್ಪತ್ರೆಗೆ ಆಗಮಿಸಿದ್ದಾರೆ.
ಅವರ ನಿಧನಕ್ಕೆ ಕಾಂಗ್ರೆಸ್ ಸಂತಾಪ ಸೂಚಿಸಿ, "ಶ್ರೀಮತಿ ಸುಷ್ಮಾ ಸ್ವರಾಜ್ ಅವರ ಅಕಾಲಿಕ ನಿಧನದ ಬಗ್ಗೆ ಕೇಳಿದಾಗ ನಮಗೆ ಬೇಸರವಾಗಿದೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನಮ್ಮ ಸಂತಾಪ" ಎಂದು ಟ್ವೀಟ್ ಮಾಡಿದ್ದಾರೆ.
Previous Post
Next Post

0 Post a Comment: