ಮಡಿಕೇರಿ :ಭಾರತ ಸರ್ಕಾರದ ಅಂತರ್ ಸಚಿವಾಲಯದ ಕೇಂದ್ರ ತಂಡವು ಆಗಸ್ಟ್, 27 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತಂಡದ ಅಧಿಕಾರಿಗಳೊಂದಿಗೆ ಇದ್ದು, ಅಗತ್ಯ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅವರು ಸೆಸ್ಕ್, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ, ಬೃಹತ್ ನೀರಾವರಿ ಹಾಗೂ ಸಣ್ಣ ನೀರಾವರಿ, ಕೃಷಿ, ತೋಟಗಾರಿಕೆ, ಪಶುಪಾಲನೆ, ಸಾರ್ವಜನಿಕ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹೀಗೆ ಹಲವು ಇಲಾಖೆ ಅಧಿಕಾರಿಗಳು ಹಾಜರಿದ್ದು ತಮ್ಮ ಇಲಾಖೆ ವ್ಯಾಪ್ತಿಯ ನಷ್ಟ ಮತ್ತಿತರ ಬಗ್ಗೆ ಅಗತ್ಯ ಮಾಹಿತಿ ಒದಗಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು. ಕೇಂದ್ರ ಅಧಿಕಾರಿಗಳ ತಂಡವು ಆಗಸ್ಟ್, 27 ರಂದು ಬೆಳಗ್ಗೆ 9 ಗಂಟೆಗೆ ಕೂಡಿಗೆ ಸೈನಿಕ ಶಾಲೆಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದು, ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ಪ್ರಕೃತಿ ವಿಕೋಪ ಸಂಬಂಧ ಮಾಹಿತಿ ನೀಡಲಾಗುತ್ತದೆ. ಬಳಿಕ ನೆಲ್ಯಹುದಿಕೇರಿಯ ಪರಿಹಾರ ಕೇಂದ್ರ ವೀಕ್ಷಣೆ, ನಂತರ ಕುಂಬಾರಗುಂಡಿ, ಕರಡಿಗೋಡು, ಕೊಂಡಂಗೇರಿಗೆ ಭೇಟಿ ನೀಡಿ ಪ್ರವಾಹದಿಂದ ಉಂಟಾಗಿರುವ ಮನೆ ಹಾನಿ ವೀಕ್ಷಣೆ ಮಾಡಲಿದ್ದಾರೆ. ಬಳಿಕ ಮಾಕುಟ್ಟ ರಸ್ತೆ ವೀಕ್ಷಣೆ ಮಾಡಲಿದ್ದಾರೆ. ಹಾಗೆಯೇ ಕಾಫಿ, ಭತ್ತ, ಬೆಳೆಹಾನಿ ವೀಕ್ಷಣೆ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸ್ನೇಹ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರಾಜು, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ತಮ್ಮಯ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಜಿ.ಪಂ. ಎಂಜಿನಿಯರ್ ಪ್ರಭು, ತಹಶೀಲ್ದಾರರಾದ ಮಹೇಶ್, ಗೋವಿಂದ ರಾಜು, ತಾ.ಪಂ.ಇಒಗಳಾದ ಲಕ್ಷ್ಮೀ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಗೋಪಾಲಕೃಷ್ಣ, ಪೌರಾಯುಕ್ತರಾದ ರಮೇಶ್, ಮುಖ್ಯಾಧಿಕಾರಿಗಳಾದ ಶ್ರೀಧರ, ಕಾರ್ಮಿಕ ಅಧಿಕಾರಿ ಯತ್ನಟ್ಟಿ, ಕಾಫಿ ಮಂಡಳಿ ಉಪ ನಿರ್ದೇಶಕರು ಇತರರು ಇದ್ದರು.
ಕೊಡಗು ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ತಂಡ ಭೇಟಿ; ಪೂರ್ವಭಾವಿ ಸಭೆ
Categories:
Featured
ಕೊಡಗು
Publish Date:
August 26, 2019

0 Post a Comment: