ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿರ್ದೇಶನದ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿನ್ನೆಲೆಯ ನಳಿನ್ 2009 ರಲ್ಲಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದರು. ಆ ಬಳಿಕ 2014 ಮತ್ತು 2019 ರಲ್ಲಿಯೂ ನಿರಂತರವಾಗಿ ಮಂಗಳೂರು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಹೊಂದಿಕೊಂಡು ಕೆಲಸ ಮಾಡಬಲ್ಲ ವ್ಯಕ್ತಿಯನ್ನೇ ಅಧ್ಯಕ್ಷ ಹುದ್ದೆಗೆ ನೇಮಿಸಲಾಗಿದೆ. ಈ ಹುದ್ದೆಗೆ ಸಿ.ಟಿ.ರವಿ, ಅರವಿಂದ ಲಿಂಬಾವಳಿ ಹೆಸರು ಕೇಳಿ ಬಂದಿತ್ತು. ಅಂತಿಮವಾಗಿ ವರಿಷ್ಠರು ಸಂಘಟನಾ ಸಾಮರ್ಥ್ಯ ಹೊಂದಿರುವ, ರಾಜ್ಯದ ಪ್ರಮುಖ ಬಂಟ ಸಮುದಾಯದ ನಳಿನ್ ಅವರಿಗೆ ಪಕ್ಷದ ಚುಕ್ಕಾಣಿ ನೀಡಿದ್ದಾರೆ.
ನಳಿನ್ ಕುಮಾರ್ ಕಟೀಲ್ ರಾಜ್ಯ ಬಿಜೆಪಿ ಅಧ್ಯಕ್ಷ ರಾಗಿ ನೇಮಕ
Categories:
ರಾಜ್ಯ ಸುದ್ದಿ
ರಾಷ್ಟ್ರೀಯ ಸುದ್ದಿ
Publish Date:
August 20, 2019
ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ನೇಮಕ ಮಾಡಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿರ್ದೇಶನದ ಮೇರೆಗೆ ಈ ನೇಮಕ ಮಾಡಲಾಗಿದೆ ಎಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿನ್ನೆಲೆಯ ನಳಿನ್ 2009 ರಲ್ಲಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾದರು. ಆ ಬಳಿಕ 2014 ಮತ್ತು 2019 ರಲ್ಲಿಯೂ ನಿರಂತರವಾಗಿ ಮಂಗಳೂರು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜತೆ ಹೊಂದಿಕೊಂಡು ಕೆಲಸ ಮಾಡಬಲ್ಲ ವ್ಯಕ್ತಿಯನ್ನೇ ಅಧ್ಯಕ್ಷ ಹುದ್ದೆಗೆ ನೇಮಿಸಲಾಗಿದೆ. ಈ ಹುದ್ದೆಗೆ ಸಿ.ಟಿ.ರವಿ, ಅರವಿಂದ ಲಿಂಬಾವಳಿ ಹೆಸರು ಕೇಳಿ ಬಂದಿತ್ತು. ಅಂತಿಮವಾಗಿ ವರಿಷ್ಠರು ಸಂಘಟನಾ ಸಾಮರ್ಥ್ಯ ಹೊಂದಿರುವ, ರಾಜ್ಯದ ಪ್ರಮುಖ ಬಂಟ ಸಮುದಾಯದ ನಳಿನ್ ಅವರಿಗೆ ಪಕ್ಷದ ಚುಕ್ಕಾಣಿ ನೀಡಿದ್ದಾರೆ.

0 Post a Comment: