ಅನಿವಾಸಿ ಭಾರತಿಯ ಬ್ಲಡ್ ಡೋನರ್ಸ್ ಮಂಗಳೂರು(ರಿ) ತಂಡದಿಂದ ಬಕ್ರೀದ್ ಹಬ್ಬದ ಈದ್ ಸಂದೇಶ


ರಿಯಾದ್:ದಿನಾಂಕ ಆಗಸ್ಟ್ 11 ತ್ಯಾಗ, ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ಸೌದಿ, ಕತಾರ್,ದುಬೈಯಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರು ನಾಡಿನ ಪಕೃತಿ ವಿಕೋಪಕ್ಕೆ ತುತ್ತಾಗಿರುವ ಜನರ ನೋವಿಗೆ ಸ್ಪಂಧಿಸುತ್ತಾ ಇಂದು ಬಕ್ರೀದ್ ಹಬ್ಬವನ್ನು ಸರಳವಾಗಿ ಆಚರಿಸಿದರು. ಬಕ್ರೀದ್ ತ್ಯಾಗ ಬಲಿದಾನದ ಸಂಕೇತ. ಪ್ರವಾದಿ ಇಬ್ರಾಹಿಮ್‌ರು ತಮ್ಮ ಮಗನಾದ ಇಸ್ಮಾಯಿಲ್‌ರನ್ನು ಸೃಷ್ಟಿಕರ್ತ ಅಲ್ಲಾನಿಗೆ ಬಲಿ ಕೊಡಲು ಮುಂದಾದ ದಿನವನ್ನು ಈದ್ ಉಲ್ ಅದಾ ಅರ್ಥಾತ್ ಬಕ್ರೀದ್ ಎನ್ನಲಾಗುತ್ತದೆ. ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಶಕ್ತ ಮುಸ್ಲಿಮರು, ಇಸ್ಲಾಂ ಧರ್ಮದ ಐದು ಪ್ರಮುಖ ಕರ್ತವ್ಯಗಳಲ್ಲೊಂದಾದ ಪವಿತ್ರ ಹಜ್ ಯಾತ್ರೆಗೆ ತೆರಳುತ್ತಾರೆ. 

ಪ್ರವಾದಿ ಮಹಮ್ಮದ್‌ರ ಕರ್ಮಭೂಮಿಯಾಗಿದ್ದ ಸೌದಿ ಅರೇಬಿಯಾದ ಮೆಕ್ಕಾ ಮತ್ತು ಮದೀನ ಪಟ್ಟಣಗಳಲ್ಲಿರುವ ಪವಿತ್ರ ಯಾತ್ರಾ ಸ್ಥಳಗಳ ದರ್ಶನ ಪಡೆದು ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸಿ ಬರುತ್ತಾರೆ. ವಿಶ್ವದ ಮೂಲೆ ಮೂಲೆಗಳಿಂದ ಬಂದು ಹಜ್ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಬಕ್ರೀದ್ ಹಬ್ಬದ ದಿನದಂದು ತಮ್ಮ ಯಾತ್ರೆಯನ್ನು ಪೂರೈಸಿ ತಮ್ಮ ತಮ್ಮ ತಾಯಿನಾಡಿಗೆ ಮರಳುತ್ತಾರೆ. ಒಟ್ಟಾರೆ, ಹಜ್ ಯಾತ್ರೆ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ನಡೆಯುವ ಕ್ರಿಯೆ. ಈ ಸಂದರ್ಭದಲ್ಲಿ ಅವರು ಬಕ್ರೀದ್ ಹಬ್ಬದ ಹಿನ್ನೆಲೆಯನ್ನು ತಿಳಿಸಿದರು. ಪ್ರತಿಯೊಬ್ಬ ಮುಸ್ಲಿಂ ಬಾಂಧವರು ಪ್ರವಾದಿಯವರ ತ್ಯಾಗ, ಔದಾರ್ಯ, ಸ್ವಾಮಿನಿಷ್ಠೆಯ ಸವಿ ನೆನಪಿಗೆ ಬಕ್ರೀದ್ ಅನ್ನು ಆಚರಿಸಿಕೊಂಡು ಬರುತ್ತಾರೆ. ನಂತರ ಮುಸ್ಲಿಂ ಬಾಂಧವರು ಒಬ್ಬರನ್ನೊಬ್ಬರು ಅಪ್ಪಿಕೊಳ್ಳುವ ಮೂಲಕ ಹಬ್ಬದ ಶುಭಾಷಯಗಳನ್ನು ವಿನಿಮಯ ಮಾಡಿಕೊಂಡರು. ನಂತರ ಮಾರ್ಗದುದ್ದಕ್ಕೂ ಕುಳಿತಿದ್ದ ಬಡ ಜನತೆಗೆ ತಮ್ಮ ಕೈಲಾದಷ್ಟು ಸಹಾಯವನ್ನು ಮಾಡುವರು. 

 ವರದಿ: ಬ್ಲಡ್ ಡೋನರ್ಸ್ ಮಂಗಳೂರು(ರಿ) ಮಾಧ್ಯಮ ವಿಭಾಗ
Previous Post
Next Post

0 Post a Comment: