ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ಉದ್ಘಾಟನಾ ಸಮಾರಂಭ : ವಿದ್ಯಾರ್ಥಿಗಳಿಗೆ ಶಿಸ್ತು, ಸಮಯಪಾಲನೆ ಅಗತ್ಯ : ಬ್ಯಾಂಕ್ ವ್ಯವಸ್ಥಾಪಕ ದಿನೇಶ್ ಸಲಹೆ 


ಮಡಿಕೇರಿ : ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ಉದ್ಘಾಟನಾ ಸಮಾರಂಭ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ಕಾರ್ಯಕ್ರಮವು ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಮಗು ಹೆಮ್ಮರವಾಗಿ ಬೆಳೆಯಲು ಶಿಸ್ತು, ಸಮಯಪಾಲನೆ ಅಗತ್ಯವಾಗಿದೆ. ವಿದ್ಯಾರ್ಥಿಗಳು ಶಿಸ್ತು ಪಾಲಿಸುವುದರ ಮೂಲಕ ಉತ್ತಮ ಗುರಿ ಮುಟ್ಟಲು ಸಾಧ್ಯ. ಇದರಿಂದ ಮಕ್ಕಳು ತಮ್ಮ ಗುರಿಯತ್ತ ಚಿಂತನೆ ಮಾಡಲು ಸಾಧ್ಯ. ವಿದ್ಯಾರ್ಥಿಗಳು ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ನುಡಿದರು. ಮಕ್ಕಳು ಯಶಸ್ಸಿನತ್ತ ಚಿಂತನೆ ನಡೆಸಬೇಕಾಗಿದೆ ಎಂದು ಭಾರತೀಯ ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕ ದಿನೇಶ್ ಅವರು ನುಡಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಧನಂಜಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಕೆಂಚಪ್ಪ, ಪ್ರಾಂಶುಪಾಲರಾದ ವಿಜಯ್, ರಾಜ್ಯಶಾಸ್ತ್ರದ ಉಪನ್ಯಾಸಕ ಚಿದಾನಂದ ಇತರರು ಇದ್ದರು.
Previous Post
Next Post

0 Post a Comment: