ಮಡಿಕೇರಿ::05-08-2019 ರಂದು ಬೆಳಗ್ಗಿನ ಜಾವ ಮಳೆಯಿಂದ ವಿರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಬದಿ ಭೂ ಕುಸಿತ ಉಂಟಾಗಿದ್ದು, ನಾನು ಈ ದಿನ (ದಿನಾಂಕ:5-08-2019 ರಂದು) ಬೆಳಿಗ್ಗೆ ತಹಶೀಲ್ದಾರ್, ಲೋಕೋಪಯೋಗಿ ಇಂಜಿನಿಯರ್ ಮತ್ತು ಇತರೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿರುತ್ತೇನೆ. ರಸ್ತೆಯನ್ನುತಾತ್ಕಾಲಿಕವಾಗಿ ದುರಸ್ತಿಪಡಿಸುವ ಉದ್ಧೇಶದಿಂದ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮೂರು ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್ ನಿಂದ ಮಾಕುಟ್ಟ ಚೆಕ್ ಪೋಸ್ಟ್ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿದ ನಂತರ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಮುಕ್ತಗೊಳಿಸಿ, ಶಾಶ್ವತವಾಗಿ ರಸ್ತೆಯನ್ನು ದುರಸ್ತಿಗೊಳಿಸಲು ಕ್ರಮ ವಹಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಸಹಕರಿಸಲು ಜಿಲ್ಲಾಡಳಿತ ಕೋರಿದೆ.
!! ಕೇರಳಕ್ಕೆ ಪ್ರಯಾಣಿಸುವವರು ಮಾನಂದವಾಡಿ ರಸ್ತೆ ಮಾರ್ಗವಾಗಿ ತೆರಳಲು ಮನವಿ !!



0 Post a Comment: