ಲೋಕಾಯುಕ್ತರಿಂದ ಸಾರ್ವಜನಿಕ ಕುಂದುಕೊರತೆ ಸಭೆ 


ಮಡಿಕೇರಿ (ಟೈಮ್ಸ್ ಆಫ್ ಕೂರ್ಗ್ ):-ಲೋಕಾಯುಕ್ತ ಅವರು ಜಿಲ್ಲೆಯ ತಾಲ್ಲೂಕು ಕೇಂದ್ರಗಳಲ್ಲಿ ಸಾರ್ವಜನಿಕ ಕುಂದುಕೊರತೆ ಸಭೆಯನ್ನು ಎಲ್ಲಾ ಇಲಾಖೆಯ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿ ಸಾರ್ವಜನಿಕರ ದೂರುಗಳನ್ನು ಬಗೆಹರಿಸಲು ಸೆಪ್ಟೆಂಬರ್, 05 ರಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸಭಾಂಗಣ, ಸೆಪ್ಟೆಂಬರ್, 07 ರಂದು ವಿರಾಜಪೇಟೆ ಪಟ್ಟಣ ಪಂಚಾಯಿತಿ ಸಭಾಂಗಣ, ಸೆಪ್ಟೆಂಬರ್, 09 ರಂದು ನಗರದ ಕಾವೇರಿ ಕಲಾಕ್ಷೇತ್ರ ಹಾಗೂ ಸೆಪ್ಟೆಂಬರ್, 11 ರಂದು ಕುಶಾಲನಗರ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಯಲಿದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
Previous Post
Next Post

0 Post a Comment: