ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ 



ಮಡಿಕೇರಿ ಆ.16(ಕರ್ನಾಟಕ ವಾರ್ತೆ):-ಜಿಲ್ಲೆಯಲ್ಲಿ ಆಗಸ್ಟ್, 16 ರಿಂದ ಆಗಸ್ಟ್, 23 ರವರೆಗೆ ಗಣಕಯಂತ್ರ ಶಿಕ್ಷಣ ಪರೀಕ್ಷೆಗಳು ನಗರದ ಶ್ರೀ ಸದ್ಗುರು ಕೈಗಾರಿಕಾ ತರಬೇತಿ ಕೇಂದ್ರ, ಶ್ರೀನಿಕೇತನದಲ್ಲಿ ನಡೆಯಲಿದ್ದು, ಈ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ನಿಯಮಬಾಹಿರ ಚಟುವಟಿಕೆ ಹಾಗೂ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಬಂಧಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಈ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮತ್ತು ಸೈಬರ್ ಕೆಫೆಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶಿಸಿದ್ದಾರೆ.
Previous Post
Next Post

0 Post a Comment: