ಮಡಿಕೇರಿ ಆ.11(ಕರ್ನಾಟಕ ವಾರ್ತೆ):-ಮಳೆ ಹಾನಿ ಪರಿಹಾರ ಸಂಬಂಧ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷ್ಮಿಪ್ರಿಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್ ಮತ್ತಿತರರ ಉಪಸ್ಥಿತಿಯಲ್ಲಿ ಭಾನುವಾರ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಕಳೆದ ಒಂದು ವಾರದಿಂದ ಸುರಿದ ಧಾರಾಕಾರ ಮಳೆಯಿಂದ ಭೂ ಕುಸಿತ ಉಂಟಾಗಿ 7 ಮಂದಿ ಜೀವ ಕಳೆದುಕೊಂಡಿದ್ದಾರೆ. ಇವರ ಕುಟುಂಬದವರಿಗೆ ತಕ್ಷಣವೇ ಪರಿಹಾರ ನೀಡುವಂತೆ ಉಪ ವಿಭಾಗಾಧಿಕಾರಿ ಅವರಿಗೆ ಸೂಚಿಸಿದರು. ಪ್ರಕೃತಿ ವಿಕೋಪ ಮಾರ್ಗಸೂಚಿಯಂತೆ ದಿನಬಳಕೆ ಸಾಮಗ್ರಿಗಳನ್ನು ಕಳೆದುಕೊಂಡ ಕುಟುಂಬದವರಿಗೆ 3800.ರೂ. ಪರಿಹಾರ ಒದಗಿಸುವಂತೆ ಅವರು ವಿ.ಅನ್ಬುಕುಮಾರ್ ಅವರು ನಿರ್ದೇಶನ ನೀಡಿದರು. ಮಳೆಗಾಲದ ಸಂದರ್ಭದಲ್ಲಿ ಅತ್ಯಗತ್ಯವಾಗಿ ಬೇಕಿರುವ ಬೋಟ್ ಹಾಗೂ ರ್ಯಾಪ್ಟ್‍ಗಳನ್ನು ಹೆಚ್ಚುವರಿಯಾಗಿ ತರಿಸಿಕೊಳ್ಳುವುದು. ಮತ್ತು ಅಗತ್ಯ ವಾಹನಗಳನ್ನು ವ್ಯವಸ್ಥೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ನಿರ್ದೇಶನ ನೀಡಿದರು. ಕೃಷಿ, ತೋಟಗಾರಿಕೆ ಕಾಫಿ ಮತ್ತಿತ್ತರ ಬೆಳೆ ನಷ್ಟದ ಅಂದಾಜು ಪಟ್ಟಿ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಭೂ ಕುಸಿತದಿಂದ ಜೀವ ಕಳೆದುಕೊಂಡ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಜೋತೆಗೆ ಪ್ರಧಾನಮಂತ್ರಿಯವರ ಪರಿಹಾರ ನಿದಿಯಿಂದ 2 ಲಕ್ಷ ರೂ ಪರಿಹಾರ ನೀಡಲಾಗುತ್ತದೆ. ಈ ಪರಿಹಾರ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಹಾಗೆಯೇ ಗಾಯಗೊಂಡವರಿಗೆ ಪರಿಹಾರ ಒದಗಿಸಲು ಅವಕಾಶವಿದ್ದು, ಅಗತ್ಯ ಕ್ರಮಕೈಗೊಳ್ಳುವಂತೆ ಕಂದಾಯ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅವರು ಸೂಚಿಸಿದರು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪರಿಹಾರ ಕೇಂದ್ರದಲ್ಲಿನ ಸಂತ್ರಸ್ತರಿಗೆ ಆಹಾರ ಕಿಟ್ ವಿತರಣೆ, ಮತ್ತಿತರ ಬಗ್ಗೆ ಹಲವು ಮಾಹಿತಿ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಿ.ವಿ ಸ್ನೇಹಾ, ಉಪ ವಿಭಾಗಧಿಕಾರಿ ಟಿ.ಜವರೆಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ರಾಜು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಚಂದ್ರಶೇಖರ್, ಕಾಫಿ ಮಂಡಳಿಯ ಉಪ ನಿರ್ದೇಶಕರಾದ ಶೀವಕುಮಾರ ಸ್ವಾಮಿ (ಮಡಿಕೇರಿ), ಸತೀಶ್ ಚಂದ್ರ (ವಿರಾಜಪೇಟೆ), ಪಿ.ಶಿವಪ್ರಸಾದ್ (ಚೆಟ್ಟಳ್ಳಿ), ಐಎಎಸ್ ಮತ್ತು ಕೆಎಎಸ್ ಪ್ರೊಬೇಷನರಿ ಅಧಿಕಾರಿಗಳು ಇತರರು ಇದ್ದರು.
ಪರಿಹಾರ ನೀಡಲು ವಿ.ಅನ್ಬುಕುಮಾರ್ ಸೂಚನೆ
Categories:
Featured
ಕೊಡಗು
Publish Date:
أغسطس 11, 2019

0 Post a Comment: