ಸೆ.13 ರಂದು ಪೋಷಣ ಮಾಸಾಚರಣೆ 


ಮಡಿಕೇರಿ (TOC ನ್ಯೂಸ್ ) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಪೋಷಣ ಅಭಿಯಾನ ಯೋಜನೆಯಡಿ’ ಪೋಷಣ ಮಾಸಾಚರಣೆ’’ ಕಾರ್ಯಕ್ರಮವು ಸೆಪ್ಟೆಂಬರ್, 13 ರಂದು ಬೆಳಗ್ಗೆ 11 ಗಂಟೆಗೆ ನಗರದ ಕೆಳಗಿನ ಕೊಡವ ಸಮಾಜದಲ್ಲಿ ನಡೆಯಲಿದೆ.
ಕಾರ್ಯಕ್ರಮಕ್ಕೂ ಮೊದಲು ಸೆ.13 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದಿಂದ ಪೌಷ್ಠಿಕ ಆಹಾರಕ್ಕೆ ಸಂಬಂಧಿಸಿದಂತೆ ಜಾಥ ನಡೆಯಲಿದೆ. 
ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಸಿ.ಕೆ.ಬೋಪಣ್ಣ, ತಾ.ಪಂ. ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಕೆ.ಮೋಹನ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಕೆ. ರಾಧ ಇತರರು ಪಾಲ್ಗೊಳ್ಳಲಿದ್ದಾರೆ.
Previous Post
Next Post

0 Post a Comment: