Home
ಕೊಡಗು
ಸೆ.17 ರಂದು ವಿಶ್ವಕರ್ಮ ಜಯಂತ್ಯುತ್ಸವ ಸಮಾರಂಭ
ಸೆ.17 ರಂದು ವಿಶ್ವಕರ್ಮ ಜಯಂತ್ಯುತ್ಸವ ಸಮಾರಂಭ
Categories:
ಕೊಡಗು
Uploaded by:
Admin @Times Of Coorg
Publish Date:
سبتمبر 16, 2019
ಮಡಿಕೇರಿ (TOC ನ್ಯೂಸ್) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್, 17 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತ್ಯುತ್ಸವ ಸಮಾರಂಭ ನಡೆಯಲಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಎಸ್.ಸುರೇಶ್ ಕುಮಾರ್, ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ, ಸಂಸದರಾದ ಪ್ರತಾಪ್ ಸಿಂಹ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಎಸ್.ಲೋಕೇಶ್‍ಸಾಗರ್, ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಎಸ್.ಜೆ.ದೇವದಾಸ್, ಸರಸ್ವತಿ ಡಿಎಡ್ ಕಾಲೇಜಿನ ಪ್ರಾಂಶುಪಾಲರಾದ ಕುಮಾರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಇತರರು ಪಾಲ್ಗೊಳ್ಳಲಿದ್ದಾರೆ.
0 Post a Comment: