ಸೆ.21 ರಂದು ಸಾರ್ವಜನಿಕ ಕುಂದುಕೊರತೆ ಮತ್ತು ಅಹವಾಲು ಸ್ವೀಕಾರ ಸಭೆ ,


ಸೋಮವಾರಪೇಟೆ (TOC ನ್ಯೂಸ್) : ಕರ್ನಾಟಕ ಲೋಕಾಯುಕ್ತ, ಕೊಡಗು ಜಿಲ್ಲೆ, ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ಸೆಪ್ಟೆಂಬರ್, 21 ರಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಅಹವಾಲು ಸಭೆ ಏರ್ಪಡಿಸಲಾಗಿದೆ. ಸೆಪ್ಟೆಂಬರ್, 21 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಗಳನ್ನು ವಿತರಿಸಲಿರುವರು. ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡೆವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದು. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಠಾಣೆ, ಗೌಳಿಬೀದಿ, ಮಡಿಕೇರಿ 08272-220797 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತದ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.
Previous Post
Next Post

0 Post a Comment: