ಬೆಂಗಳೂರಿನಲ್ಲಿ 8ದಿನಗಳಲ್ಲಿ ಬರೊಬ್ಬರಿ 2.40 ಟ್ರಾಫಿಕ್ ದಂಡ..!

ಬೆಂಗಳೂರು (TOC ನ್ಯೂಸ್) : ರಾಜ್ಯದಲ್ಲಿ ಯಾವಾಗ ಟ್ರಾಫಿಕ್ ದಂಡವನ್ನು ಇಳಿಸುತ್ತಾರೆ ಎಂಬುವುದು ಮಾತ್ರ ಇರುವರೆಗೂ ಸ್ಪಷ್ಟವಾಗಿಲ್ಲ. ಆದರೆ ಕಳೆದ 8 ದಿನಗಳಲ್ಲಿ ಬೆಂಗಳೂರು ನಗರವೊಂದರಲ್ಲೇ ಬರೋಬ್ಬರಿ 2.40 ಕೋಟಿ ಹಣ ದಂಡದ ರೂಪದಲ್ಲಿ ವಸೂಲಾಗಿದೆ.
ಟ್ರಾಫಿಕ್ ರೂಲ್ಸ್ ಉಲ್ಲಂಘನೆ ಅಡಿ ಹೊಸ ನಿಯಮಗಳು ಅನ್ವಯವಾದ ಬಳಿಕ ಇದುವರೆಗೂ 84,589 ಪ್ರಕರಣಗಳು ದಾಖಲಾಗಿವೆ. ವಿಶೇಷ ಎಂದರೆ ಡ್ರಿಂಕ್ ಅಂಡ್ ಡ್ರೈವ್ ಕೇಸ್‍ಗಳು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿವೆ. ಕೇವಲ 150 ಪ್ರಕರಣಗಳು ಮಾತ್ರ ಇದುವರೆಗೂ ದಾಖಲಾಗಿವೆ

ಕಳೆದ 8 ದಿನಗಳ ಅವಧಿಯಲ್ಲಿ 84,589 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ ಹೆಲ್ಮೆಟ್ ಇಲ್ಲದೆ ಬೈಕ್ ಚಾಲನೆ ಮಾಡಿದ್ದ 16,710 ಪ್ರಕರಣ, ಹಿಂಬದಿ ಸವಾರ ಹೆಲ್ಮೆಟ್ ಇಲ್ಲದೇ ಪ್ರಯಾಣ ಮಾಡಿದ್ದ ಸಂಬಂಧ 10,977 ಪ್ರಕರಣಗಳು, ಸಿಗ್ನಲ್ ಜಂಪ್ 10,128 ಪ್ರಕರಣ, ನೋ ಪಾರ್ಕಿಂಗ್ 10,867 ಪ್ರಕರಣ, ಡ್ರಿಂಕ್ ಅಂಡ್ ಡ್ರೈವ್ ಅಡಿ 150 ಪ್ರಕರಣಗಳು ದಾಖಲಾಗಿದೆ. ಒಟ್ಟು 60 ವಿವಿಧ ಬಗೆಯ ಸಂಚಾರ ನಿಯಮಗಳ ಉಲ್ಲಂಘನೆ ಅಡಿ ದಂಡವನ್ನು ವಿಧಿಸಲಾಗುತ್ತಿದೆ. 
Previous Post
Next Post

0 Post a Comment: