ಮಡಿಕೇರಿ ಸೆ.04(TOC ಕೊಡಗು);- ಉಪ ಮುಖ್ಯಮಂತ್ರಿ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಸಚಿವರಾದ ಗೋವಿಂದ ಎಂ.ಕಾರಜೋಳ ಅವರು ಬುಧವಾರ ಮಡಿಕೇರಿ-ಸಂಪಾಜೆ ಮಾರ್ಗ ರಾಷ್ಟ್ರೀಯ ಹೆದ್ದಾರಿಯನ್ನು ವೀಕ್ಷಿಸಿದರು. ಮಡಿಕೇರಿ, ಕಾಟಕೇರಿ, 2 ನೇ ಮೊಣ್ಣಂಗೇರಿ ಬಳಿ ಕುಸಿದಿರುವ ರಾಷ್ಟ್ರೀಯ ಹೆದ್ದಾರಿಯನ್ನು ಉಪ ಮುಖ್ಯಮಂತ್ರಿ ಅವರು ಪರಿಶೀಲಿಸಿದರು. ಬಳಿಕ ಮಾತನಾಡಿದ ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಅವರು ಧಾರಾಕಾರ ಮಳೆ ಹಾಗೂ ಪ್ರವಾಹದಿಂದಾಗಿ ಮಡಿಕೇರಿ-ಸಂಪಾಜೆ, ಕೊಣನೂರು-ಮಾಕುಟ್ಟ, ವಿರಾಜಪೇಟೆ-ಕೊಡ್ಲಿಪೇಟೆ ಹೀಗೆ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳು ರಸ್ತೆಗಳು ಕುಸಿದಿವೆ, ಸೇತುವೆಗಳು ಹದಗೆಟ್ಟಿವೆ ಆ ನಿಟ್ಟಿನಲ್ಲಿ ರಸ್ತೆ, ಸೇತುವೆಗಳನ್ನು ಪುನರ್ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದ್ದು, ಈಗಾಗಲೇ ಮಾನ್ಯ ಮುಖ್ಯಮಂತ್ರಿ ಅವರು 536 ಕೋಟಿ ರೂ. ವಿಶೇಷ ಪ್ಯಾಕೇಜ್ನ್ನು ಘೋಷಿಸಿದ್ದು, ಲೋಕೋಪಯೋಗಿ ಇಲಾಖೆಯಿಂದ ಹೆಚ್ಚುವರಿಯಾಗಿ 58 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದರು. ರಸ್ತೆ, ಸೇತುವೆ ಮತ್ತಿತರ ಕಾಮಗಾರಿಗಳನ್ನು ಕೈಗೊಳ್ಳಲು ರಾಜ್ಯದಲ್ಲಿ ಸುಮಾರು ಒಂದು ಸಾವಿರ ಕೋಟಿ ರೂ.ಗೂ ಹೆಚ್ಚು ಹಣ ಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಅವರು ಹೇಳಿದರು. ಶಾಸಕರಾದ ಕೆ.ಜಿ.ಬೋಪಯ್ಯ ತೀವ್ರ ಅತಿವೃಷ್ಟಿಯಿಂದಾಗಿ ಜಿಲ್ಲೆಯಲ್ಲಿ ರಸ್ತೆ ಮತ್ತು ಸೇತುವೆಗಳು ಹದಗೆಡುತ್ತಿವೆ. ಆದ್ದರಿಂದ ಶಾಶ್ವತ ಕಾಮಗಾರಿ ನಿರ್ಮಾಣ ಮಾಡಬೇಕಿದೆ ಎಂದು ಉಪ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಿದರು. ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಸಿಇಒ ಕೆ.ಲಕ್ಷ್ಮೀಪ್ರಿಯಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಗುರುಪ್ರಸಾದ್, ಮುಖ್ಯ ಎಂಜಿನಿಯರ್ ರಮೇಂದ್ರ, ಮಂಗಳೂರು ವಿಭಾಗದ ಅಧೀಕ್ಷಕರ ಎಂಜಿನಿಯರ್ ಕಾಂತರಾಜು, ಕಾರ್ಯಪಾಲಕ ಎಂಜಿನಿಯರ್ ಇಬ್ರಾಹಿಂ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಶಿವರಾಮ್, ಸುರೇಶ್, ರಾಷ್ಟ್ರೀಯ ಹೆದ್ದಾರಿ ವಿಭಾಗದ ಮುಖ್ಯ ಎಂಜಿನಿಯರ್ ಗಣೇಶ್, ಅಧೀಕ್ಷಕ ಎಂಜಿನಿಯರ್ ರಾಘವನ್, ಕಾರ್ಯಪಾಲಕ ಎಂಜಿನಿಯರ್ ಹೊಳ್ಳ ಇತರರು ಇದ್ದರು.
ಮಡಿಕೇರಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ವೀಕ್ಷಿಸಿದ ಉಪ ಮುಖ್ಯಮಂತ್ರಿ ಕಾರಜೋಳ
Categories:
Featured
ಕೊಡಗು
Publish Date:
September 05, 2019

0 Post a Comment: