ಡಿ.ಕೆ ಶಿವಕುಮಾರ್ ತಿಹಾರ್ ಜೈಲಿಗೆ....!


ನವದೆಹಲಿ: ದೆಹಲಿಯ ಆರ್‍ಎಂಎಲ್ ಆಸ್ಪತ್ರೆಯಲ್ಲಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಪೊಲೀಸರು ತಿಹಾರ್ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ.

ಹೈ ಬಿಪಿ ಮತ್ತು ಹೈ ಶುಗರ್ ಹಿನ್ನೆಲೆಯಲ್ಲಿ ಶನಿವಾರದಿಂದ ಡಿಕೆ ಶಿವಕುಮಾರ್ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ವೈದ್ಯಾಧಿಕಾರಿಗಳು ಆರೋಗ್ಯ ಸ್ಥಿರ ಎಂಬ ವರದಿ ನೀಡಿದ ಬೆನ್ನಲ್ಲೇ ತಿಹಾರ ಜೈಲಿಗೆ ಡಿ.ಕೆ.ಶಿವಕುಮಾರ್ ಶಿಫ್ಟ್ ಮಾಡಲಾಗಿದೆ. ನ್ಯಾಯಾಲಯದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆಯುತ್ತಿದ್ದು, ಈಗಾಗಲೇ ಡಿಕೆಶಿವಕುಮಾರ್ ಅವರನ್ನ ಅಕ್ಟೋಬರ್ 1ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶಿಸಿದೆ. ಆನಾರೋಗ್ಯದ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
Previous Post
Next Post

0 Post a Comment: