ಮಡಿಕೇರಿ(TOC ನ್ಯೂಸ್)):-ದೇಶದಾಧ್ಯಂತ ಸೆಪ್ಟೆಂಬರ್, 25 ರಂದು ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮ (ಎನ್‍ಡಿಡಿ) ಹಾಗೂ ಸೆಪ್ಟೆಂಬರ್, 30 ರಂದು ಮೋಪ್ ಅಪ್ ಡೇ ಕಾರ್ಯಕ್ರಮ ನಡೆಯುತ್ತಿದ್ದು, 1-19 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಆಲ್‍ಬೆಂಡಜೋಲ್- 400 ಎಂ.ಜಿ. ಮಾತ್ರೆಗಳನ್ನು ನೀಡಲಾಗುವುದು.
ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮವನ್ನು 10 ಫೆಬ್ರವರಿ 2015ರಲ್ಲಿ ಪ್ರಾರಂಭ ಮಾಡಲಾಗಿದ್ದು, ಮೊದಲಿಗೆ 11 ರಾಜ್ಯಗಳಲ್ಲಿ ಇದನ್ನು ಜಾರಿಗೆ ತರಲಾಯಿತು. 2018 ಫೆಬ್ರವರಿಯಲ್ಲಿ ಈ ಕಾರ್ಯಕ್ರಮವನ್ನು 34 ರಾಜ್ಯಗಳಿಗೆ ವಿಸ್ತರಣೆ ಮಾಡಲಾಗಿದ್ದು, ಇದೀಗ 9 ನೇ ಸುತ್ತಿನ ಕಾರ್ಯಕ್ರಮವಾಗಿದೆ.
ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮದಲ್ಲಿ 1-5 ವರ್ಷದ ಒಳಗಿನ ಮಕ್ಕಳಿಗೆ ಅಂಗನವಾಡಿಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. 6-19 ವರ್ಷದ ಮಕ್ಕಳಿಗೆ ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆ ಹಾಗೂ ಕಾಲೇಜುಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಆಶಾ ಕಾರ್ಯಕರ್ತೆಯರು 6-19 ವರ್ಷದ ಒಳಗಿನ ಶಾಲೆಯಿಂದ ಹೊರಗುಳಿದ ಫಲಾನುಭವಿಗಳ ಪಟ್ಟಿಯನ್ನು ತಯಾರಿಸಿ ಅವರಿಗೆ ಅಂಗನವಾಡಿಗಳಲ್ಲಿ ಮಾತ್ರೆಗಳನ್ನು ನೀಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ 1-2 ವರ್ಷದ ಮಕ್ಕಳಿಗೆ ಅರ್ಧ ಆಲ್‍ಬೆಂಡಜೋಲ್ ಮಾತ್ರೆ ಹಾಗೂ 2-19 ವರ್ಷದ ಮಕ್ಕಳಿಗೆ ಒಂದು ಆಲ್‍ಬೆಂಡಜೋಲ್ ಮಾತ್ರೆಯನ್ನು ಜಗಿದು ನುಂಗಿಸಬೇಕಾಗಿರುತ್ತದೆ.
ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಲು ಅಂತರ್ ಇಲಾಖೆಗಳ ಸಹಭಾಗಿತ್ವ ಅವಶ್ಯವಾಗಿರುತ್ತದೆ. ಇದರಲ್ಲಿ ಮುಖ್ಯವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಸ್ವಚ್ಚ ಭಾರತ್ ಮಿಷನ್, ಪಂಚಾಯತ್ ರಾಜ್, ಮುನ್ಸಿಪಲ್ ಕಾರ್ಪೋರೇಷನ್, ಸ್ಕೌಟ್ಸ್ ಆಂಡ್ ಗೈಡ್ಸ್ ಇಲಾಖೆಗಳ ಸಹಭಾಗಿತ್ವ ಅಗತ್ಯವಾಗಿರುತ್ತದೆ.
ಸೆಪ್ಟೆಂಬರ್, 25 ರಂದು ನಡೆಯುವ ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮಕ್ಕೆ ನಮ್ಮ ಜಿಲ್ಲೆಯಲ್ಲಿ 1-19 ವರ್ಷದೊಳಗಿನ ಮಕ್ಕಳ ಗುರಿ 1,26,560 ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು 30,416, ಅಂಗನವಾಡಿಯಿಂದ ಹೊರಗುಳಿದ ಮಕ್ಕಳು 2,173, ಎಲ್ಲಾ ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು 80,374 ಹಾಗೂ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 10,766 ಹಾಗೂ IಖಿI ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 2,821 ಆಗಿರುತ್ತದೆ.
ಮಡಿಕೇರಿ ತಾಲ್ಲೂಕು:-1-19 ವರ್ಷದ ಒಳಗಿನ ಮಕ್ಕಳ ಒಟ್ಟು ಗುರಿ 30,676 ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು 8,363 ಅಂಗನವಾಡಿಯಿಂದ ಹೊಗುಳಿದ ಮಕ್ಕಳು 347, ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು 17,954, ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 3,538 ಹಾಗೂ IಖಿI ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 474 ಇರುತ್ತಾರೆ.
ವಿರಾಜಪೇಟೆ ತಾಲ್ಲೂಕಿನಲ್ಲಿ 1-19 ವರ್ಷದ ಒಳಗಿನ ಮಕ್ಕಳ ಒಟ್ಟು ಗುರಿ 46,555 ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು 11,292, ಅಂಗನವಾಡಿಯಿಂದ ಹೊಗುಳಿದ ಮಕ್ಕಳು 1,270, ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು 29,216 ಹಾಗೂ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 3,574 ಹಾಗೂ IಖಿI ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 1,103 ಇರುತ್ತಾರೆ.
ಸೋಮವಾರಪೇಟೆ ತಾಲ್ಲೂಕಿನಲ್ಲಿ 1-19 ವರ್ಷದ ಒಳಗಿನ ಮಕ್ಕಳ ಒಟ್ಟು ಗುರಿ 49,429 ಹೊಂದಿದ್ದು, ಇದರಲ್ಲಿ ಅಂಗನವಾಡಿ ಮಕ್ಕಳು 10,761, ಅಂಗನವಾಡಿಯಿಂದ ಹೊಗುಳಿದ ಮಕ್ಕಳು 556, ಸರಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಯಲ್ಲಿರುವ ಮಕ್ಕಳು 33,204 ಹಾಗೂ ಪದವಿ ಪೂರ್ವ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 3,664 ಹಾಗೂ IಖಿI ಮತ್ತು ತಾಂತ್ರಿಕ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು 1,244 ಇರುತ್ತಾರೆ.
ಎನ್‍ಡಿಡಿ ಕಾರ್ಯಕ್ರಮಕ್ಕೆ ಅವಶ್ಯಕತೆಯಿರುವ ಆಲ್‍ಬೆಂಡಜೋಲ್ 400ಎಂಜಿ ಮಾತ್ರೆಗಳನ್ನು ಈಗಾಗಲೇ ಎಲ್ಲಾ ಪ್ರಾ.ಆ.ಕೇಂದ್ರಗಳ ಮುಖಾಂತರ ಎಲ್ಲಾ ಶಾಲೆ, ಕಾಲೇಜು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡಲಾಗಿರುತ್ತದೆ ಹಾಗೂ ಕಾರ್ಯಕ್ರಮವನ್ನು ಅನುಷ್ಟಾನಗೊಳಿಸಲು ಎಲ್ಲಾ ಶಾಲೆ/ ಕಾಲೇಜು ನೋಡಲ್ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಕಿ.ಮ.ಆ.ಸ ಹಾಗೂ ಆಶಾ ಕಾರ್ಯಕರ್ತೆಯರಿಗೆ ಓಆಆ ಕಾರ್ಯಕ್ರಮದ ಬಗ್ಗೆ ಅರ್ಧ ದಿನದ ತರಭೇತಿಯನ್ನು ನೀಡಲಾಗಿರುತ್ತದೆ.
ಕಳೆದ 2019ರ ಫೆಬ್ರವರಿ 08 ರಂದು ನಡೆದ ಎನ್.ಡಿ.ಡಿ. ಕಾರ್ಯಕ್ರಮ ಹಾಗೂ ಫೆಬ್ರವರಿ, 14 ರಂದು ನಡೆದ ಮೋಪ್ ಅಪ್ ಕಾರ್ಯಕ್ರಮದಲ್ಲಿ ನಮ್ಮ ಜಿಲ್ಲೆಯು 1,28,009 ಮಕ್ಕಳ ಗುರಿಯನ್ನು ಹೊಂದಿದ್ದು, ಇದರಲ್ಲಿ 1,27,675 ಮಕ್ಕಳಿಗೆ ಗುಳಿಗೆಯನ್ನು ನೀಡಲಾಗಿದ್ದು, ಶೇ.99.74 ಪ್ರಗತಿಯನ್ನು ಸಾಧಿಸಲಾಗಿರುತ್ತದೆ.
ಮಡಿಕೇರಿ ತಾಲ್ಲೂಕಿನಲ್ಲಿ ಮಕ್ಕಳ ಒಟ್ಟು ಗುರಿ 31,554 ಆಗಿದ್ದು, ಇದರಲ್ಲಿ 31,220 ಮಕ್ಕಳಿಗೆ ಗುಳಿಗೆಯನ್ನು ನೀಡಲಾಗಿದ್ದು, 98.94% ಪ್ರಗತಿಯನ್ನು, ವಿರಾಜಪೇಟೆ ತಾಲ್ಲೂಕಿನಲ್ಲಿ ಮಕ್ಕಳ ಒಟ್ಟು ಗುರಿ 46,656 ಆಗಿದ್ದು, ಇದರಲ್ಲಿ 46,656 ಮಕ್ಕಳಿಗೆ ಗುಳಿಗೆಯನ್ನು ನೀಡಲಾಗಿದ್ದು, ಶೇ.100 ರಷ್ಟು ಪ್ರಗತಿಯನ್ನು ಹಾಗೂ ಸೋಮವಾರಪೇಟೆ ತಾಲ್ಲೂಕಿನಲ್ಲಿ ಮಕ್ಕಳ ಒಟ್ಟು ಗುರಿ 49,799 ಆಗಿದ್ದು, ಇದರಲ್ಲಿ 49,799 ಮಕ್ಕಳಿಗೆ ಗುಳಿಗೆಯನ್ನು ನೀಡಲಾಗಿದ್ದು, ಶೇ.100 ಪ್ರಗತಿಯನ್ನು ಸಾಧಿಸಲಾಗಿರುತ್ತದೆ.
ಸೆಪ್ಟೆಂಬರ್, 25 ರಂದು ನಡೆಯುವ “ರಾಷ್ಟ್ರೀಯ ಜಂತು ಹುಳ ನಿವಾರಣಾ ಕಾರ್ಯಕ್ರಮ” ಹಾಗೂ ಸೆಪ್ಟೆಂಬರ್ 30 ರಂದು ನಡೆಯುವ ಮೋಪ್ ಅಪ್ ಕಾರ್ಯಕ್ರಮಕ್ಕೆ ಈ ಮೇಲೆ ತಿಳಿಸಿರುವ ಎಲ್ಲಾ ಇಲಾಖೆಗಳು ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಬೇಕಾಗಿ ಮತ್ತು ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಈ ಗುಳಿಗೆಗಳನ್ನು ತೆಗೆದುಕೊಳ್ಳಲು ಪ್ರೋತ್ಸಾಹ ನೀಡಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ಕೋರಿದ್ದಾರೆ.

0 Post a Comment: