‘ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವ ಜನರು’ ಕುರಿತ ಭಾಷಣ ಸ್ಪರ್ಧೆ


ಮಡಿಕೇರಿ (TOC ನ್ಯೂಸ್):-ದೇಶದೆಲ್ಲೆಡೆ “ಸಂವಿಧಾನ ದಿವಸ” ವನ್ನು ಆಚರಿಸುವ ಸಂಬಂಧ “ದೇಶಭಕ್ತಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವ ಜನರು” ಕುರಿತ ಭಾಷಣ ಸ್ಪರ್ಧೆಯನ್ನು ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಆಯೋಜಿಸಲಾಗಿದ್ದು, ಭಾಷಣ ಸ್ಪರ್ಧೆಯು ಹಿಂದಿ ಅಥವಾ ಇಂಗ್ಲೀಷ್ ಭಾಷೆಗಳಲ್ಲಿ ಇರಲಿದ್ದು, ಭಾಷಣದ ಅವಧಿ 10 ನಿಮಿಷ ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿಜೇತರುಗಳಿಗೆ ಆಕರ್ಷಕ ಬಹುಮಾನಗಳನ್ನು ನೀಡಲಿದ್ದು, ಜಿಲ್ಲಾ ಮಟ್ಟದಲ್ಲಿ ಆಯ್ಕೆ ಆದವರಿಗೆ ಪ್ರಥಮ ಬಹುಮಾನ 5 ಸಾವಿರ,  ದ್ವಿತೀಯ ಬಹುಮಾನ 2 ಸಾವಿರ, ತೃತೀಯ ಬಹುಮಾನ ಒಂದು ಸಾವಿರ. ರಾಜ್ಯ ಮಟ್ಟದಲ್ಲಿ ಆಯ್ಕೆಯಾದ ಮಕ್ಕಳಿಗೆ ಪ್ರಥಮ ಬಹುಮಾನ 25 ಸಾವಿರ, ದ್ವಿತೀಯ ಬಹುಮಾನ 10 ಸಾವಿರ, ತೃತೀಯ ಬಹುಮಾನ 5 ಸಾವಿರ. ರಾಷ್ಟ್ರ ಮಟ್ಟಕ್ಕೆ ಆಯ್ಕೆ ಆದವರಿಗೆ ಪ್ರಥಮ ಬಹುಮಾನ 2 ಲಕ್ಷ ರೂ., ದ್ವಿತೀಯ ಬಹುಮಾನ 1 ಲಕ್ಷ ರೂ., ತೃತೀಯ ಬಹುಮಾನ 50 ಸಾವಿರ ರೂ. ನೀಡಲಾಗುತ್ತದೆ. 
  ಮಡಿಕೇರಿ ತಾಲೂಕು ಮಟ್ಟದ ಆಯ್ಕೆ ಪ್ರಕ್ರಿಯೆಯು ಸೆಪ್ಟೆಂಬರ್, 25 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಭಾಗದಲ್ಲಿ ನಡೆಯಲಿದೆ. ಇಲ್ಲಿಂದ ಆಯ್ಕೆಗೊಂಡ ಮೂರು ಯುವ ಜನರು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಬೇಕಾಗುತ್ತದೆ. ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಆಯ್ಕೆಯಾದವರು ರಾಜ್ಯ ಮಟ್ಟದ ಸ್ಪರ್ಧೆಗೆ ಭಾಗವಹಿಸಬೇಕು. ರಾಜ್ಯ ಮಟ್ಟದಲ್ಲಿ ಭಾಗವಹಿಸಿ ಆಯ್ಕೆಯಾದವರು ರಾಷ್ಟ್ರಮಟ್ಟದಲ್ಲಿ ಭಾಗವಹಿಸಬೇಕಾಗುತ್ತದೆ. ಈ ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಚಿಸುವ ಆಯಾಯ ತಾಲೂಕಿನ ಆಸಕ್ತ 18-29 ವಯೋಮಿತಿಯ ಯುವಜನರು ಹೆಚ್ಚಿನ ಮಾಹಿತಿಗೆ ಮಡಿಕೇರಿಯಲ್ಲಿ ಪ್ರೊ.ದಯಾನಂದ್(9449766772), ಎಚ್.ಬಿ.ಸಂತೋಷ್ ಕುಮಾರ್(8762306475), ಎಂ.ಬಿ.ಮಿಥುನ್(8762306475) ಅವರನ್ನು ಹಾಗೂ ಹೆಚ್ಚಿನ ವಿವರಗಳಿಗೆ ನೆಹರು ಯುವ ಕೇಂದ್ರ ಕಚೇರಿ(08272-225470) ಅನ್ನು ಸಂಪರ್ಕಿಸಬಹುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಸಮನ್ವಯ ಅಧಿಕಾರಿ ಅವರು ತಿಳಿಸಿದ್ದಾರೆ.
Previous Post
Next Post

0 Post a Comment: