ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಗೆ ಸಿಬಿಐ ನೋಟಿಸ್...!


ಬೆಂಗಳೂರು: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ತಿಹಾರ್ ಜೈಲಿಗೆ ಶಿಫ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್‍ನ ಶಾಸಕ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ.
ಜಮೀರ್ ಅಹ್ಮದ್ 90 ಕೋಟಿ ರೂ. ಬೆಲೆಬಾಳುವ ನಿವೇಶನವನ್ನು ಐಎಂಎಗೆ 9.38 ಕೋಟಿ ರೂ.ಗಳಿಗೆ ಮಾರಾಟ ಮಾಡಿ, ಬಾಕಿ 80 ಕೋಟಿ ರೂ.ಗಳನ್ನು ಹವಾಲಾ ರೂಪದಲ್ಲಿ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಶುಕ್ರವಾರ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಜಮೀರ್ ಅಹ್ಮದ್ ಅವರಿಗೆ ನೋಟಿಸ್ ನೀಡಿದೆ.
ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಮೊನ್ನೆಯಷ್ಟೇ ಹೈಕೋರ್ಟ್ ಸಿಬಿಐ ವಿರುದ್ಧ ಚಾಟಿ ಬೀಸಿತ್ತು. ಈ ಪ್ರಕರಣವು ತನಿಖೆ ಕುಂಠಿತವಾಗುತ್ತಿದೆ. ತನಿಖೆ ಪ್ರಗತಿಯಲ್ಲಿ ಇಲ್ಲವೆಂದು ಬೇಸರ ವ್ಯಕ್ತಪಡಿಸಿತ್ತು. ಹೀಗಾಗಿ ತನಿಖೆ ಚುರುಕುಗೊಳಿಸಿರುವ ಸಿಬಿಐ, ಪ್ರಮುಖ ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದೆ.
Previous Post
Next Post

0 Post a Comment: