ಮಡಿಕೇರಿ : ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ವತಿಯಿಂದ ಪ್ರಸ್ತಕ(೨೦೧೯-೨೦) ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ ‘ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ’
ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಯನ್ನು ದಾಖಲಾತಿಗಳೊಂದಿಗೆ ಸೆಪ್ಟೆಂಬರ್, ೨೦ ರೊಳಗೆ ಆಯಾಯ ತಾಲ್ಲೂಕಿನ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಪೊನ್ನಂಪೇಟೆ, ವಿರಾಜಪೇಟೆ ತಾಲ್ಲೂಕು, ಸೋಮವಾರಪೇಟೆ ಮತ್ತು ಮಡಿಕೇರಿ ಇಲ್ಲಿಗೆ ಸಲ್ಲಿಸುವುದು. ವಿದ್ಯಾಸಿರಿ ಸಹಾಯಧನವನ್ನು ಅನುದಾನ ಲಭ್ಯತೆಗೆ ಅನುಸಾರವಾಗಿ ಮಂಜೂರು ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಇಲಾಖಾ ವೆಬ್ಸೈಟ್ www.gokdom.kar.nic.in ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮಾಹಿತಿ ಕೇಂದ್ರ, ಮೌಲಾನಾ ಅಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ ದೂ.ಸಂ.೦೮೨೭೨-೨೨೦೨೧೪ ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಚ್.ಡಿ.ಪುಟ್ಟರಾಜು ಅವರು ತಿಳಿಸಿದ್ದಾರೆ.

0 Post a Comment: