ವಾಲ್ಮೀಕಿ ಪ್ರಶಸ್ತಿಗೆ ಅರ್ಜಿ ಆಹ್ವಾನ 


ಮಡಿಕೇರಿ ಸೆ.12(TOC ನ್ಯೂಸ್):-ಪ್ರಸಕ್ತ (2019-20) ಸಾಲಿಗೆ ಶ್ರೀಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್, 13 ರಂದು ಆಚರಿಸಲಾಗುತ್ತಿದ್ದು, ಈ ಕಾರ್ಯಕ್ರಮದಲ್ಲಿ ಪರಿಶಿಷ್ಟ ಪಂಗಡದ ಜನಾಂಗದ ಶೈಕ್ಷಣಿಕ, ಆರ್ಥಿಕ ಏಳಿಗೆಗಾಗಿ ಶ್ರಮಿಸಿದ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಅವರ ಆದರ್ಶಗಳನ್ನು ಸಕಾರಗೊಳಿಸುವಂತಹ ಪರಿಶಿಷ್ಟ ವರ್ಗದ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಶ್ರಮಿಸಿ ಸಾಧನೆ ಮಾಡಿ ದಾಖಲೆ ಹೊಂದಿರುವ ಅರ್ಹ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಲು ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರು ತಾಲೂಕಿನ ಖಾಯಂ ನಿವಾಸಿಯಾಗಿದ್ದು. ಪರಿಶಿಷ್ಟ ಪಂಗಡದ ಸಮುದಾಯದವರಾಗಿರಬೇಕು. ಶ್ರೀ ಮಹರ್ಷಿ ವಾಲ್ಮೀಕಿರವರ ಆದರ್ಶಗಳನ್ನು ಸಾಕಾರಗೊಳಿಸಿ ಪರಿಶಿಷ್ಟ ವರ್ಗದ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಶ್ರಮಿಸಲು ಸಾಧನೆ ಮಾಡಿದ ದಾಖಲೆಗಳನ್ನು ಒದಗಿಸುವುದು,
 ಸಾಧನೆಗಳ ವಿವರಗಳನ್ನು ದಾಖಲೆಗಳೊಂದಿಗೆ ಸಲ್ಲಿಸುವುದು ಆಸಕ್ತ ವ್ಯಕ್ತಿಗಳು ಹೆಚ್ಚಿನ ಮಾಹಿತಿಗೆ ದೂ.ಸಂ.08276-281115 ಅಥವಾ ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-2) ಅವರನ್ನು ಸಂಪರ್ಕಿಸಬಹುದು.
Previous Post
Next Post

0 Post a Comment: