ಗುಂಡಿಕ್ಕಿಕೊಂಡು ವ್ಯಾಪಾರಿ ಆತ್ಮಹತ್ಯೆ


ಮಡಿಕೇರಿ (TOC ನ್ಯೂಸ್) : ಕಾಫಿ ವ್ಯಾಪಾರಿ ತನ್ನ ಮಳಿಗೆಯಲ್ಲಿ ಗುಂಡಿಕ್ಕಿಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಹುದಿಕೇರಿ ಗ್ರಾಮದಲ್ಲಿ ನಡೆದಿದೆ. 
ಗ್ರಾಮದ ಅಚ್ಚಿಯಂಡ ಸುನೀಲ್ (45) ಎಂಬಾತ ಆತ್ಮಹತ್ಯೆಗೆ ಶರಣಾದ ವ್ಯಕ್ತಿಯಾಗಿದ್ದಾನೆ. ಹುದಿಕೇರಿಯ ಮಹಾದೇವ ದೇವಾಲಯ ಮುಂಭಾಗದ ಮಳಿಗೆಯಲ್ಲಿ ರಿವಾಲ್ವರ್ ನಿಂದ ಗುಂಡಿಕ್ಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದು ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ 20 ವರ್ಷಗಳಿಂದ ವ್ಯಾಪಾರದಲ್ಲಿ ತೊಡಗಿಕೊಂಡಿದ್ದು ಸಮಾಜ ಸೇವೆಯಲ್ಲೂ ಸಕ್ರೀಯರಾಗಿದ್ದರು. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ವ್ಯಕ್ತಿ ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.

Previous Post
Next Post

0 Post a Comment: