ಬೆಂಗಳೂರು : ಇಡಿ ತನಿಖೆ ಸಂಕಷ್ಟದಲ್ಲಿ ಸಿಲುಕಿರುವ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಬಂಧನ ವಿರುದ್ಧ ಇಂದು ಬುಧವಾರ ಬೆಂಗಳೂರಿನಲ್ಲಿ ಒಕ್ಕಲಿಗ ಸಂಘ ಬೃಹತ್ ಪ್ರತಿಭಟನೆ ನಡೆಸಿದೆ.
ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಯ ಸಾವಿರಾರು ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.ಜನದಟ್ಟಣೆಯಿಂದ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಮಧ್ಯೆ ಕೆಲ ಕಿಡಿಗೇಡಿಗಳು ಬಿಎಂಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

0 Post a Comment: