ನ.2 ರಂದು ಜನ ಸಂಪರ್ಕ ಸಭೆ


ಮಡಿಕೇರಿ (TOC ನ್ಯೂಸ್) :-ಕುಶಾಲನಗರ ಉಪ ವಿಭಾಗ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆ ನಿವಾರಿಸಲು ಸಭೆಯು ನವೆಂಬರ್, 02 ರಂದು ಮಧ್ಯಾಹ್ನ 11 ಗಂಟೆಗೆ ಕುಶಾಲನಗರ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್, ಸೆಸ್ಕ್, ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸೋಮವಾರಪೇಟೆ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಕುಂದುಕೊರತೆಗಳನ್ನು ನಿವಾರಿಸಲು ಸಭೆಯು ನವೆಂಬರ್, 02 ರಂದು ಮಧ್ಯಾಹ್ನ 12.30 ಗಂಟೆಗೆ ಸೋಮವಾರಪೇಟೆ ಉಪ ವಿಭಾಗ ಕಚೇರಿ ಆವರಣದಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್, ಸೆಸ್ಕ್, ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸೋಮವಾರಪೇಟೆ ಮತ್ತು ಕುಶಾಲನಗರ ವ್ಯಾಪ್ತಿಯ ಸಾರ್ವಜನಿಕರು ವಿದ್ಯುಚ್ಛಕ್ತಿಗೆ ಸಂಬಂಧಿಸಿದ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಈ ಸಭೆಯಲ್ಲಿ ಚರ್ಚಿಸಿ ಬಗೆಹರಿಸಲು ಕ್ರಮಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಸಭೆಗೆ ಹಾಜರಾಗುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ್ ಅವರು ಕೋರಿದ್ದಾರೆ.
Previous Post
Next Post

0 Post a Comment: