ಮಡಿಕೇರಿ TOC:-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳು ಜನವರಿ 10 ಮತ್ತು 11 ರಂದು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಜನವರಿ, 10 ರಂದು ಬೆಳಗ್ಗೆ 10 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಸಂಸದರಾದ ಪ್ರತಾಪ್ ಸಿಂಹ ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ನೆಲ್ಲಚಂಡ ಕಿರಣ್ ಕಾರ್ಯಪ್ಪ, ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆನ್ನೇಕರ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಕೆ.ಬಿ.ರವಿ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷರಾದ ಗುರುರಾಜ್ ಬಿ.ಎಸ್, ಸೋಮವಾರಪೇಟೆ ತಾಲ್ಲೂಕು ಅಧ್ಯಕ್ಷರಾದ ಪ್ರದೀಪ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಆರ್.ಜಯಲಕ್ಷ್ಮೀ ಬಾಯಿ, ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಅರುಣ್‍ಕುಮಾರ್, ಸರ್ಕಾರಿ ನೌಕರರ ಸಂಘದ ಖಜಾಂಚಿ ರಾಜೇಶ್ ಪಿ.ಡಿ, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯರಾದ ಪಿ.ಎಸ್.ಜನಾರ್ಧನ್, ಸರ್ಕಾರಿ ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿ ಪಿ.ಕೆ.ಶ್ರೀನಿವಾಸ್ ಇತರರು ಪಾಲ್ಗೊಳ್ಳಲಿದ್ದಾರೆ.

0 Post a Comment: