ಜ.13 ರಿಂದ 17 ರವರೆಗೆ ಶಾಂತಳ್ಳಿ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ಜಾತ್ರೆ
Publish Date:
January 03, 2020
ಸೋಮವಾರಪೇಟೆ (www.timesofcoorg.in):- ತಾಲ್ಲೂಕಿನ ಶಾಂತಳ್ಳಿಯಲ್ಲಿ ಶ್ರೀ ಕುಮಾರಲಿಂಗೇಶ್ವರ ಸ್ವಾಮಿ ಜಾತ್ರೆ ಮತ್ತು 61 ನೇ ಮಹಾರಥೋತ್ಸವವು ಜನವರಿ, 13 ರಿಂದ 17 ರವರೆಗೆ 5 ದಿನಗಳ ಕಾಲ ನಡೆಯಲಿದೆ.
ಜನವರಿ, 13 ರಂದು ಬೆಳ್ಳಿ ಬಂಗಾರ ದಿನ. ಸಂಜೆ 6.30 ರಿಂದ ಜಾತ್ರಾ ಪ್ರಾರಂಭೋತ್ಸವ ಪೂಜೆ. ಜನವರಿ, 14 ರಂದು ಮಕರ ಸಂಕ್ರಮಣ ಕರುವಿನ ಹಬ್ಬ. ರಾತ್ರಿ 7 ಗಂಟೆಗೆ ದೇಗುಲದ ಗರುಡ ಕಂಬದ ಅಗ್ರಪೀಠದಲ್ಲಿ ತುಪ್ಪದ ನಂದಾದೀಪವನ್ನು ಬೆಳಗಿಸುವುದ ಮತ್ತು ಅಂಕುರಾರ್ಪಣ ಪೂಜೆ, ಮಹಾಮಂಗಳಾರತಿ, ಪ್ರಾರ್ಥನೆ, ಪ್ರಸಾದ ಸ್ವೀಕಾರ ಕಾರ್ಯಕ್ರಮ ನಡೆಯಲಿದೆ. ಜನವರಿ, 15 ರಂದು ಅರಸು ಭಲ ಸೇವೆ, ಜನವರಿ, 16 ರಂದು 61 ನೇ ಮಹಾರಥೋತ್ಸವ ನಡೆಯಲಿದೆ.
ಜನವರಿ 17 ರಂದು ಮಹಾಸಂಪ್ರೋಕ್ಷಣೆ ವಿಧಿ ವಿಧಾನ ಅರ್ಚನೆಗಳು ನಡೆಯಲಿದೆ. ಬೆಳಗ್ಗೆ 10 ಗಂಟೆಯಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ. ನಂತರ ಮಧ್ಯಾಹ್ನ 2 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.
ಶ್ರೀ ಕುಮಾರಲಿಂಗೇಶ್ವರ ಧರ್ಮದರ್ಶಿ ಮಂಡಳಿಯ ಅಧ್ಯಕ್ಷರಾದ ಜಿ.ಎಸ್.ರಘುಕುಮಾರ್, ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಸಂಸದರಾದ ಪ್ರತಾಪ್ ಸಿಂಹ, ಸಂಬಾರ ಮಂಡಳಿ ನಿರ್ದೇಶಕರಾದ ಎಸ್.ಜಿ.ಮೇದಪ್ಪ, ಜಿ.ಪಂ. ಅಧ್ಯಕ್ಷರಾದ ಬಿ.ಎ.ಹರೀಶ್, ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಇತರರು ಪಾಲ್ಗೊಳ್ಳಲಿದ್ದಾರೆ.

0 Post a Comment: