TOC ಮಡಿಕೇರಿ :-ನಗರದ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು “ಮಮತೆಯ ತೊಟ್ಟಿಲು” ಕೇಂದ್ರವನ್ನು ಶನಿವಾರ ಉದ್ಘಾಟಿಸಿದರು.
ನವಜಾತ ಶಿಶುಗಳನ್ನು ನೋಡಿಕೊಳ್ಳುವ ಸ್ಥಿತಿಯಲ್ಲಿರದವರು ಇದರ ಸದುಪಯೋಗ ಪಡೆದುಕೊಳ್ಳಬಹುದು. ಪ್ರತಿಯೊಬ್ಬರಿಗೂ ಬದುಕುವ ಆಸೆ ಇರುತ್ತದೆ. ಮಗು ಬೇಡವಾದಲ್ಲಿ, ಎಲ್ಲೆಂದರಲ್ಲಿ ಬಿಸಾಡದೆ, ತೊಟ್ಟಿಯ ಬದಲು ಮಮತೆಯ ತೊಟ್ಟಿಲಿನಲ್ಲಿ ಮಲಗಿಸಬಹುದು.
ಮಗುವನ್ನು ಎಲ್ಲೆಂದರಲ್ಲಿ ಬಿಸಾಡದೇ, ಮಾನವೀಯತೆ ದೃಷ್ಟಿಯಿಂದ ಮಗುವನ್ನು ನೋಡಿ, ಬೇಡವಾದ ಮಗುವಿನ ಆರೈಕೆಗೆ ಇಂತಹ ತೊಟ್ಟಿಲನ್ನು ಬಳಸಿಕೊಳ್ಳಬೇಕು. ಇಂತಹ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಹೆಚ್ಚಿನ ಜಾಗೃತಿ ಮೂಡಿಸುವಂತಗಾಗಬೇಕು.
ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನೀಲ್ ಸುಬ್ರಮಣಿ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷರಾದ ನೆಲ್ಲಚಂಡ ಕಿರಣ್ ಕಾರ್ಯಪ್ಪ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ. ಸಿಇಒ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆನ್ನೇಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್, ವೈದ್ಯಕೀಯ ಕಾಲೇಜಿನ ಡೀನ್ ಕೆ.ಬಿ.ಕಾರ್ಯಪ್ಪ, ವೈದ್ಯಕೀಯ ಕಾಲೇಜಿನ ಅಧೀಕ್ಷಕರಾದ ಡಾ.ಎ.ಜೆ.ಲೋಕೇಶ್, ಆರ್.ಎಂ.ಒ ಡಾ.ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ ಇತರರು ಪಾಲ್ಗೊಂಡಿದ್ದರು.

0 Post a Comment: