ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾರರ ದಿನ ಆಚರಣೆ

ಮಡಿಕೇರಿ ಜ.30(TOC NEWS):-ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನಲ್ಲಿ ಜ.24 ರಂದು ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು. ಇದರ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಉಪನ್ಯಾಸಕ ಹರೀಶ್ ಕಿಗ್ಗಾಲುರವರು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿ, ಮತದಾನದ ಮಹತ್ವವನ್ನು ತಿಳಿಸಿಕೊಟ್ಟರು. ಪ್ರಾಂಶುಪಾಲರಾದ ಪ್ರೊ. ಪಟ್ಟಡ ಪೂವಣ್ಣನವರು ಉಪಸ್ಥಿತರಿದ್ದರು.
Previous Post
Next Post

0 Post a Comment: