TOC ಸಿದ್ದಾಪುರ : ಭಾವೈಕ್ಯತೆಯ ಧಾರ್ಮಿಕ ಕೇಂದ್ರ ಎಂದೇ ಪ್ರಸಿದ್ಧಿಯಾಗಿರುವ ಪಾಲಿಬೆಟ್ಥ ಆರ್ಕಾಡ್ ಪಟ್ಟಾಣ್ ಬಾಬ ಶಾಹ್ ವಲಿಯವರ ಉರೂಸ್ ಸಮಾರೋಪ ಸಮಾರಂಭ ಅಂಗವಾಗಿ ಸರ್ವಧರ್ಮ ಸಮ್ಮೇಳನ ನಡೆಯಲಿದೆ .
ಇಂದು (ಫೆ 17ರಂದು) ಸಂಜೆ 6.30ರಿಂದ ಎಲ್ಲ ಭಕ್ತರಿಗೆ ಸಾಮೂಹಿಕ ಅನ್ನ ಸಂತರ್ಪಣೆ ಕಾರ್ಯ ನಡೆಯಲಿದೆ.
ರಾತ್ರಿ 7ಗಂಟೆಯಿಂದ ದರ್ಗಾ ಆವರಣದ ವೇದಿಕೆಯಲ್ಲಿ ಸರ್ವಧರ್ಮ ಸಮ್ಮೇಳನ ನಡೆಯಲಿದೆ .
ಕೊಡಗು ಜಂಇಯ್ಯತ್ತುಲ್ ಉಲಮಾ ಅಧ್ಯಕ್ಷ ಎಡಪಾಲದ ಕೆ.ಎ ಮಹಮ್ಮೂದ್ ಮುಸ್ಲಿಯಾರ್ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು ಜಿಲ್ಲಾ ಉಪ ಖಾಝಿ ಎಡಪಾಲದ ಎಂ .ಎಂ ಅಬ್ದುಲ್ಲಾ ಫೈಝಿ ಪ್ರಾರ್ಥನೆ ನೆರವೇರಿಸಲಿದ್ದು ಜುಮಾ ಮಸೀದಿ ಖತೀಬ್ ಅಲಿ ಸಖಾಫಿ ಉದ್ಘಾಟಿಸಲಿದ್ದಾರೆ.
ಪ್ರಭಾಷಣ ಲೋಕದ ಸಿಡಿಲಮರಿ ನೌಫಲ್ ಸಖಾಫಿ ಕಳಸ ಹಾಗು ಪೊನ್ನಂಪೇಟೆಯ ಶ್ರೀರಾಮಕೃಷ್ಣ ಶಾರದಾಶ್ರಮದ ಸ್ವಾಮಿ ಬೋಧ ಸ್ವರೂಪಾನಂದ ಮಹಾರಾಜ್ ಮುಖ್ಯ ಭಾಷಣ ಮಾಡಲಿದ್ದಾರೆ .
ಸಮ್ಮೇಳನದ ಕಾರ್ಯಕ್ರಮದಲ್ಲಿ ಗಣ್ಯರಾದ ಕುಶಾಲನಗರದ ರೆ .ಫಾ ಜೀವನ್ , ಉಪ ವಿಭಾಗಾಧಿಕಾರಿ ಜವರೇಗೌಡ, ಡಿವೈಎಸ್ಪಿ ದಿನೇಶ್ ಕುಮಾರ್, ಅಸಿಸ್ಟೆಂಟ್ ಡೈರೆಕ್ಟರ್ ಕೆ.ಪಿ ಸಂಶುದ್ದೀನ್ ,ಮಾಜಿ ವಕ್ಫ್ ಬೋರ್ಡ್ ಅಧ್ಯಕ್ಷ ಕೆ.ಎ ಯಾಕೂಬ್, ಟಾಟಾ ಕಾಫಿ ಸಂಸ್ಥೆಯ ಎಂ.ಬಿ ಗಣಪತಿ, ಮಾಜಿ ವಿಧಾನ ಪರಿಷತ್ ಸದಸ್ಯ ಅರುಣ್ ಮಾಚಯ್ಯ, ಜಿಲ್ಲಾ ಪಂಚಾಯಿತಿ ಸದಸ್ಯ ವಿಜು ಸುಬ್ರಮಣಿ ,ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಕೊಲ್ಲೀರ ಧರ್ಮಜ, ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಪುಲಿಯಂಡ ಬೋಪಣ್ಣ, ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೊಲ್ಲೀರ ಗೋಪಿ, ಪಾಲಿಬೆಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಎಂ ತಿಮ್ಮಯ್ಯ, ಹೊಸೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್, ಕಾಫಿ ಬೆಳೆಗಾರ ಕಾರ್ತಿಕ್ ಚಿದಂಬರಂ, ಹೊಸೂರು ಗ್ರಾಮ ಪಂಚಾಯಿತಿ ಸದಸ್ಯ ರತ್ನಾ ಸುಬ್ಬಯ್ಯ, ಚೇಂಬರ್ ಕಾಮರ್ಸ್ ಅಧ್ಯಕ್ಷ ಎಂ.ಎಂ ಕಾಳಪ್ಪ, ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಎಂ. ಎಂ ಉಸ್ಮಾನ್, ಜಿಲ್ಲಾ ಪಂಚಾಯಿತಿ ಸದಸ್ಯ ಅಬ್ದುಲ್ ಲತೀಫ್ ಸುಂಟಿಕೊಪ್ಪ, ಜಿಲ್ಲಾ ವಕ್ಫ್ ಬೋರ್ಡ್ ಉಪಾಧ್ಯಕ್ಷ ಅಬ್ದುಲ್ ರೆಹಮಾನ್ ಬಾಪು, ಹೊದ್ದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಬ್ದುಲ್ಲಾ, ಹಾಗೂ ಪಾಲಿಬೆಟ್ಟದ ಪಿ.ಕೆ ಇಸ್ಮಾಯಿಲ್ ಸೇರಿದಂತೆ ಧಾರ್ಮಿಕ ಪಂಡಿತರು, ಉಲಮಾ. ಉಮರಾಗಳು, ಸಮಾಜ ಸೇವಕರು.ದಾನಿಗಳು ಸೇರಿದಂತೆ ಮತ್ತಿತರರು ಭಾಗವಹಿಸಲಿದ್ದು ಸಮಾರೋಪ ಸಮಾರಂಭದಲ್ಲಿ ಡಾ.ಉಸ್ತಾದ್ ಕೋಯಾ ಕಾಪಾಡ್ ತಂಡದವರಿಂದ ಬುರ್ದಾ, ಕವಾಲಿ ,ನಹತೇ ಶರೀಫ್ ಎಂಬ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.
0 Post a Comment: