ಫೀ.ಮಾ.ಕಾರ್ಯಪ್ಪ ಕಾಲೇಜು ಮಹಾದ್ವಾರ ನಿರ್ಮಾಣಕ್ಕೆ ಚಾಲನೆ

          ಮಡಿಕೇರಿ TOC :-ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ಕಾಲೇಜಿಗೆ ನೂತನ ಮಹಾದ್ವಾರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು.
 ಕಾಲೇಜಿನ ಈಗ ಇರುವ ಪ್ರವೇಶ ದ್ವಾರವನ್ನು ತೆರವು ಮಾಡಿ ಹೊಸದಾಗಿ 3 ಲಕ್ಷ ರೂ. ವೆಚ್ಚದಲ್ಲಿ ನೂತನ ಮಹಾದ್ವಾರ ನಿರ್ಮಿಸಲಾಗುತ್ತಿದೆ. ಈ ಹಿನ್ನೆಲೆ ಇಂದು ಭೂಮಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಒಂದು ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ಡಾ.ಅಮ್ಮಾಟಂಡ ಪಾರ್ವತಿ ಅಪ್ಪಯ್ಯ ತಿಳಿಸಿದರು. 
ಈ ಸಂದರ್ಭ ಸಂಘದ ಉಪಾಧ್ಯಕ್ಷ ನಾಟೋಳಂಡ ಚರ್ಮಣ, ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ನಿರ್ದೇಶಕರಾದ ಬಲ್ಯಂಡ ಕೆ.ನಂಜಪ್ಪ, ಕಿಶೋರ್ ರೈ ಕತ್ತಲೆಕಾಡು, ಬಿದ್ದಂಡ ಕಾವೇರಿ ನಂಜಪ್ಪ, ಕಾಲೇಜು ಪ್ರಾಂಶುಪಾಲ ಡಾ.ಜಗತ್ ತಿಮ್ಮಯ್ಯ, ಪ್ರೊ. ರವಿಶಂಕರ್ ಹಾಗೂ ಇತರರಿದ್ದರು.
Previous Post
Next Post

0 Post a Comment: